ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಕಳೆದ ದಿನವಷ್ಟೆ ಸಚಿವ ಜಮೀರ್ ಅಹ್ಮದ್ ಖಾನ್ಗೆ ಜಾರಿ ನಿರ್ದೆಶನಾಲಯ ಸಮನ್ಸ್ ಜಾರಿ ಮಾಡಿತ್ತು. ಇದೀಗ ಸಾಕ್ಷ್ಯ ನಾಶ ಪ್ರಕರಣದಲ್ಲಿ ಸಚಿವ ಡಿ.ಕೆ ಶಿವಕುಮಾರ್ಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ನೀಡಿದೆ.
2017ರ ಆಗಸ್ಟ್ 2ರಂದು ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಸಚಿವ ಡಿ.ಕೆ ಶಿವಕುಮಾರ್ ಪೇಪರ್ ಒಂದನ್ನು ಹರಿದು ನುಂಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಐಟಿ ಕೇಸ್ ದಾಖಲಿಸಿತ್ತು.
Advertisement
Advertisement
ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಐಟಿ ದಾಖಲಿಸಿದ್ದ ಖಾಸಗಿ ದೂರನ್ನು ‘ಜನಪ್ರತಿನಿಧಿಗಳ ಕೋರ್ಟ್’ ವಿಚಾರಣೆ ನಡೆಸಿ ಕ್ಲೀನ್ಚಿಟ್ ಕೊಟ್ಟಿತ್ತು. ಇದನ್ನು ಪ್ರಶ್ನಿಸಿ ಐಟಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ಡಿ.ಕೆ.ಶಿವಕುಮಾರ್ಗೆ ನೋಟಿಸ್ ಜಾರಿ ಮಾಡಲು ಆದೇಶ ನೀಡಿದೆ.
Advertisement
ಇತ್ತೀಚೆಗಷ್ಟೆ ದೆಹಲಿಯ ಫ್ಲಾಟ್ನಲ್ಲಿ ಹಣ ಸಿಕ್ಕಿದ ಪ್ರಕರಣದಲ್ಲಿ ಆರೋಪ ಮುಕ್ತರನ್ನಾಗಿ ಮಾಡುವಂತೆ ಸಚಿವ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು .
Advertisement
2017ರ ಆಗಸ್ಟ್ ನಲ್ಲಿ ಡಿ.ಕೆ. ಶಿವಕುಮಾರ್ ಮನೆಯ ಮೇಲೆ ಐಟಿ ದಾಳಿ ಮಾಡಿತ್ತು. 2018 ರಲ್ಲಿ ಆಗಸ್ಟ್ ನಲ್ಲಿ ಐಟಿ ಇಲಾಖೆ ಡಿಕೆ ಶಿವಕುಮಾರ್ ಮೇಲೆ ನಾಲ್ಕನೇ ಪ್ರಕರಣ ದಾಖಲಿಸಿತ್ತು. 2018ರ ಸೆಪ್ಟೆಂಬರ್ 15ಕ್ಕೆ ಈ ಪ್ರಕರಣದಲ್ಲಿ ಡಿಕೆಶಿಗೆ ಜಾಮೀನು ಸಿಕ್ಕಿತ್ತು. ನಂತರ ವಿಶೇಷ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಹಿಂದೆ 3 ಪ್ರಕರಣದಿಂದ ಆರೋಪ ಮುಕ್ತರಾಗಿದ್ದ ಡಿ.ಕೆ ಶಿವಕುಮಾರ್ ಈ ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾ. ರಾಮಚಂದ್ರ ಹುದ್ದರ್ ಅವರು ಅರ್ಜಿಯನ್ನು ವಜಾಗೊಳಿಸಿ ಕೋರ್ಟಿನ ಆದೇಶ ತಿಳಿಸಿದ್ದರು.