ಧಾರವಾಡ: ಬೆಳಗಾವಿ ಅಧಿವೇಶನದ (Belagavi Session) ವೇಳೆ ಪಂಚಮಸಾಲಿ ಹೋರಾಟಗಾರರ (Panchamasali Protest) ಮೇಲೆ ನಡೆದಿದ್ದ ಲಾಠಿ ಚಾರ್ಜ್ ಪ್ರಕರಣವನ್ನು ಹೈಕೋರ್ಟ್‌ನ (High Court) ಧಾರವಾಡ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದಿದ್ದ ಲಾಠಿ ಪ್ರಹಾರ ಪ್ರಕರಣ ಕುರಿತು ತನಿಖೆಗೆ ಆದೇಶಿಸಲು ಕೋರಿ ಪಂಚಮಸಾಲಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್
ದುರುದ್ದೇಶಪೂರಿತವಾಗಿ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ಹೋರಾಟಗಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದ್ದರು. ಇನ್ನೂ ಪ್ರತಿಭಟನಾಕಾರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಲಾಠಿ ಬೀಸಿದ್ದ ಪೊಲೀಸರ ಅಮಾನತಿಗೆ ಪಂಚಮಸಾಲಿ ಸಮುದಾಯ ಆಗ್ರಹಿಸಿತ್ತು.
ಕಳೆದ ಡಿಸೆಂಬರ್ 10 ರಂದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿಗೆ (2A Reservation) ಆಗ್ರಹಿಸಿ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿತ್ತು. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದರು. ಇದನ್ನೂ ಓದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ – ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಸಂಸದರು ಕೆಂಡ