ಚಿಕ್ಕಮಗಳೂರು: ವಿವಾದಿತ ಬಾಬಾಬುಡೆನ್‍ಗಿರಿಯ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.
2018ರ ಮಾರ್ಚ್ 19ರಂದು ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್‍ರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಿಸಿತ್ತು. ಇದನ್ನು ಪ್ರಶ್ನಿಸಿ ಸಂವರ್ಧನಾ ಸಮಿತಿ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ನ್ಯಾಯಪೀಠ, ಮೌಲ್ವಿ ನೇಮಕಾತಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
Advertisement
Advertisement
ಈ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಬೆನ್ನಲ್ಲೇ ಹೈಕೋರ್ಟ್ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ. ಇದು ಹಿಂದೂಗಳಿಗೆ ಸಿಕ್ಕ ದೊಡ್ಡ ಜಯವಾಗಿದ್ದು, ದಶಕಗಳ ಹೋರಾಟಕ್ಕೆ ಸಿಕ್ಕ ಫಲ ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ. ಇದನ್ನೂ ಓದಿ: ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೆ ಪತ್ರ ಬರೆದ ಪುಟಾಣಿಗಳು