ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಆರೋಪಿ ದರ್ಶನ್‌ಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ (High Court) ನಡೆದ ವಿಚಾರಣೆ ಮಹತ್ವದ ತಿರುವು ಪಡೆದುಕೊಂಡಿದೆ. ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ (Actor Darshan) ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.
ಸಾಕ್ಷ್ಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡಬೇಕು ಎಂದು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆದಿದ್ದು, ಸಾಕ್ಷಿಗಳ ಪಾಟಿ ಸವಾಲಿನ ಸಂದರ್ಭದಲ್ಲಿ ದರ್ಶನ್ ಖುದ್ದು ಹಾಜರಾಗಲು ಅವಕಾಶ ನೀಡುವ ಬಗ್ಗೆ ನ್ಯಾಯಾಲಯ ಮಹತ್ವದ ಸೂಚನೆ ನೀಡಿದೆ. ಇದನ್ನೂ ಓದಿ: ಮಮತಾ ಟಿಎಂಸಿ ಬಣದ ಅಭ್ಯರ್ಥಿ ಯೂಟರ್ನ್ – ನಂದಿಗ್ರಾಮ ಉಪಚುನಾವಣೆ ನಾಮಪತ್ರ ವಾಪಸ್
ದರ್ಶನ್ ಅರ್ಜಿಗೆ ಸಮ್ಮತಿಸಿದ ಹೈಕೋರ್ಟ್, ಷರತ್ತುಬದ್ಧ ಅನುಮತಿ ಕೊಟ್ಟಿದೆ. ಪ್ರಾಸಿಕ್ಯೂಷನ್ 1 ವರ್ಷದಲ್ಲಿ 60 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಬೇಕು, 7 ಮುಖ್ಯ ಸಾಕ್ಷಿಗಳ ವಿಚಾರಣೆಯೂ ಇದರಲ್ಲಿ ಸೇರಿರಬೇಕು, ಮುಖ್ಯ ವಿಚಾರಣೆ ಬಳಿಕ ಕ್ರಾಸ್ ಎಕ್ಸಾಮಿನೇಷನ್‌ಗೆ ಪ್ರತ್ಯೇಕ ದಿನಾಂಕ ಹಾಗೂ ನಿಗದಿತ ದಿನಾಂಕಗಳಂದು ಕ್ರಾಸ್ ಎಕ್ಸಾಮಿನೇಷನ್ ನಡೆಸಬೇಕು. ಈ ವೇಳೆ ಸರ್ಕಾರ ಸೂಕ್ತ ಭದ್ರತೆ ಒದಗಿಸಿ ದರ್ಶನ್ ಕರೆತರಬೇಕು ಎಂದು ಪೀಠ ಆದೇಶಿಸಿದೆ.

