ನವದೆಹಲಿ: ಎಂಎಲ್‌ಸಿ (MLC) ಸೂರಜ್ ರೇವಣ್ಣಗೆ (Suraj Revanna) ಬಿಗ್ ರಿಲೀಫ್ ದೊರೆತಿದ್ದು, ಎಂಎಲ್‌ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ.
ದೂರುದಾರ ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ಸಿಎಂ – ಬರ ಪರಿಹಾರ ಬಿಡುಗಡೆಗೆ ಆಗ್ರಹ
ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದ ಆರೋಪದಡಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಚುನಾವಣಾ ಅಕ್ರಮದ ಕಾರಣಕ್ಕೆ ಸೂರಜ್ ರೇವಣ್ಣ ಅವರನ್ನು ಎಂಎಲ್‌ಸಿ ಸ್ಥಾನದಿಂದ ವಜಾಗೊಳಿಸಲು ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿತ್ತು. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠದಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಇಲ್ಲಿಯವರೆಗೆ ಸಿಕ್ಕಿರಲಿಲ್ಲ, ಮೋದಿಗೆ ಖರ್ಗೆ ಮ್ಯಾಚ್ ಆಗಬಲ್ಲ ನಾಯಕ – ಸತೀಶ್ ಜಾರಕಿಹೊಳಿ