– ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೇಕೆ ಬೇಕು?
– ಎಸ್ಐಟಿ ಸೀಜ್ ಮಾಡಿರೋ ವೀಡಿಯೋ ನೀಡುವಂತೆ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್
ಬೆಂಗಳೂರು: ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೇಳುವ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪರ ವಕೀಲರಿಗೆ ಹೈಕೋರ್ಟ್ (Karnataka High Court) ಚಾಟಿ ಬೀಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ (Rape Case) ಎಸ್ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಎಸ್ಐಟಿ (SIT) ಜಪ್ತಿ ಮಾಡಿರುವ ವೀಡಿಯೋಗಳನ್ನು ನೀಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು.
Advertisement
Advertisement
ಇದಕ್ಕೆ ಕೆರಳಿದ ಕೋರ್ಟ್ ಇತರೆ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಬೇಸರ ವ್ಯಕ್ತಪಡಿಸಿತು. ಇದನ್ನೂ ಓದಿ: ಬೀದರ್ನಲ್ಲಿ ಫಿಲ್ಮಿ ಸ್ಟೈಲ್ ಎಟಿಎಂ ಹಣ ದರೋಡೆ – ಗನ್ಮ್ಯಾನ್ ಇಲ್ಲದೇ ಹಣ ತುಂಬಲು ಬಂದಿದ್ದ ಸಿಬ್ಬಂದಿ
Advertisement
ಪ್ರಕರಣ ದಾಖಲು ಮಾಡಿದವರ ವಿಡಿಯೋ ಮಾತ್ರ ನೀಡಿ ಎಂದು ಕೋರ್ಟ್ ಸೂಚಿಸಿತು. ಮಹಿಳೆಯರ ಖಾಸಗಿತನ ಗೌರವಿಸುವುದು ಎಲ್ಲರ ಕರ್ತವ್ಯ. ಪ್ರಜ್ವಲ್ ರೇವಣ್ಣ ಅಂದ ಕೂಡಲೇ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು. ಇದನ್ನೂ ಓದಿ: ಬೀದರ್ನಲ್ಲಿ ಎಟಿಎಂ ವಾಹನದ ಮೇಲೆಯೇ ಗುಂಡು – 93 ಲಕ್ಷದೊಂದಿಗೆ ದುಷ್ಕರ್ಮಿಗಳು ಪರಾರಿ
Advertisement
ಈ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್ಪಿಪಿ ಜಗದೀಶ್, ಈಗಾಗಲೇ ಎಲ್ಲಾ ವಿಡಿಯೋ ಫೋಟೋ ನೀಡಲಾಗಿದೆ. ಪ್ರಕರಣ ವಿಳಂಬ ಮಾಡುವುಕ್ಕೆ ಕೋರ್ಟ್ ಗಳಲ್ಲಿ ಈ ರೀತಿ ಅರ್ಜಿ ಹಾಕಲಾಗುತ್ತಿದೆ. ಕೆಳಹಂತದ ನ್ಯಾಯಾಲಯದಲ್ಲೂ ಕೂಡ ಸಿಡಿಆರ್ ಕೇಳಿ ಅರ್ಜಿ ಹಾಕಿದ್ದಾರೆ ಎಂದು ವಾದಿಸಿದರು. ಇದನ್ನೂ ಓದಿ: ಮದ್ಯ ಸೇವಿಸಿದ್ದಕ್ಕೆ ಪ್ರಿಯತಮೆ ಕಿರಿಕ್ – ಮನನೊಂದು ಯುವಕ ನೇಣಿಗೆ ಶರಣು