ಬೆಂಗಳೂರು: ಕಾಂಗ್ರೆಸ್ ಶಾಸಕ ನಂಜೇಗೌಡ (Congress MLA NanjeGowda) ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣದಲ್ಲಿ ತನಿಖಾಧಿಕಾರಿ ವಿರುದ್ಧ ದಾಖಲಾಗಿದ್ದ ಎಫ್‍ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ.
ಕೋಚಿಮೂಲ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನಿರ್ದೇಶಕ ಅಶ್ವಥ್ ನಾರಾಯಣ್ (Ashwath Narayan) ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಅಶ್ವಥ್ ನಾರಾಯಣ್ ಮೇಲೆ 80 ಲಕ್ಷ ಹಣ ಪಡೆದ ಆರೋಪ ಇತ್ತು. ಹೀಗಾಗಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಾ ಇದ್ದರು. ಈ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಒತ್ತಡ ಹೇರಿದ್ರು, ತಮಗೆ ಬೇಕಾದ ಹೇಳಿಕೆ ನೀಡುವಂತೆ ಒತ್ತಡ ಹೇರುತ್ತಾ ಇದ್ದಾರೆ ಎಂದು ವಿಲ್ಸನ್ ಗಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರು.
Advertisement
Advertisement
ಈ ಪ್ರಕರಣಕ್ಕೆ ತಡೆಕೋರಿ ಹೈಕೋರ್ಟಿಗೆ (HighCourt) ಇಡಿ ಅಧಿಕಾರಿಗಳು ಅರ್ಜಿ ಸಲ್ಲಿಕೆ ಮಾಡಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ನಟರಾಜನ್ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಇಡಿ ತನಿಖೆಗೆ ಬಲ ಸಿಕ್ಕಂತಾಗಿದೆ. ಇದನ್ನೂ ಓದಿ: ಚೆನ್ನೈ ತಲುಪಿದ ಚಾಲಕ ರಹಿತ ಹಳದಿ ಮೆಟ್ರೋ- ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ರವಾನೆ