ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ಪಿಎಸ್‍ಐ ಮರುಪರೀಕ್ಷೆಗೆ ಹೈಕೋರ್ಟ್ (HighCourt) ತಡೆ ನೀಡಿದ್ದು, ಮುಂದಿನ ವಿಚಾರಣೆಯ ತನಕ ಮರುಪರೀಕ್ಷೆ ದಿನಾಂಕ ಪ್ರಕಟಿಸದಿರಲು ಸೂಚನೆ ಕೊಟ್ಟಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪಿಎಸ್‍ಐ ಕೇಸ್‍ನಲ್ಲಿ ಆರೋಪಿತ ಎಡಿಜಿಪಿ (ADGP) ಅಮೃತ್ ಪೌಲ್ ವಿರುದ್ಧ ಹೆಚ್ಚುವರಿ ಚಾರ್ಜ್‍ಶೀಟ್ ಸಲ್ಲಿಕೆ ಆಗಿದೆ. 1,406 ಪುಟಗಳ ಹೆಚ್ಚುವರಿ ಚಾರ್ಟ್‍ಶೀಟ್ ಅನ್ನು ಸಿಬಿಐ ಸಲ್ಲಿಸಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ತುಮಕೂರಿನಲ್ಲಿ ಕೊನೆಗೂ ರಸ್ತೆಗಿಳಿದ ಕಸ ಸಾಗಿಸುವ ಆಟೋಗಳು!
ಅಮೃತ್ ಪೌಲ್ ವಿರುದ್ಧದ ಆರೋಪವೇನು..?: 545 ಪಿಎಸ್‍ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ (Amruth paul) ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‍ಪಿ ಹಾಗೂ ಎಫ್‍ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ.
ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್ ಪೌಲ್ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಇಂದು ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್ ಪೌಲ್ ಅವರನ್ನು ಬಂಧಿಸಿದೆ.