ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಇದೇ ಜುಲೈ 28 ರಂದು ಕರ್ನಾಟಕ ಹೈಕೋರ್ಟ್ (Karnataka High Court) ವಿಚಾರಣೆ ನಡೆಸಲಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ (Congress Guarantee) ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Advertisement
Advertisement
ಸಿದ್ದರಾಮಯ್ಯ ಅವರು ಸಂವಿಧಾನದ ನಿಬಂಧನೆ, ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
Advertisement
Advertisement
ಕೆ.ಎಂ.ಶಂಕರ ಎಂಬವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್ಡಿಕೆ ಶಪಥ
Web Stories