ಬೆಂಗಳೂರು: ಜನವಸತಿ ಪ್ರದೇಶಗಳಲ್ಲಿ ಪಬ್‍ಗಳ ಅನುಮತಿ ವಿಚಾರವಾಗಿ ಹೈಕೋರ್ಟ್ ಬೆಂಗಳೂರು ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿದೆ.
ಪಬ್‍ಗಳಿಂದ ತೀವ್ರ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಹಾಗೂ ತೊಂದರೆ ಅನುಭವಿಸುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಅನೇಕ ಬಾರಿ ಪೊಲೀಸರಿಗೆ ಮನವಿ ಸಲ್ಲಿಸಿದ್ದೇವೆ. ಆದರೂ ಯಾವುದೇ ರೀತಿಯ ಪ್ರಯೋಜನವಿಲ್ಲವಾಗಿರಲಿಲ್ಲ ಎಂದು ಆರೋಪಿಸಿ ಪೊಲೀಸ್ ಇಲಾಖೆ, ಬಿಬಿಎಂಪಿ, ಬಿಡಿಎ, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ವಿರುದ್ಧ ಇಂದಿರಾನಗರದ ಹಲವು ಸಂಘಟನೆಗಳಿಂದ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ಸಲ್ಲಿಕೆಯಾಗಿತ್ತು.
Advertisement
Advertisement
ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ಪೀಠವು, ಸಾರ್ವಜನಿಕ ಮನವಿ ಸಂಬಂಧ ಯಾವ ಕ್ರಮ ಕೈಗೊಂಡಿದ್ದೀರಿ?, ಜನನಿಬಿಡ ಪ್ರದೇಶದಲ್ಲಿ ಯಾವ ಮಾನದಂಡದಲ್ಲಿ ಅನುಮತಿ ನೀಡಿದ್ದೀರಿ? ಸಾರ್ವಜನಿಕರ ದೂರಿನ ಬಳಿಕ ತೆಗೆದುಕೊಂಡ ಕ್ರಮ ಏನು ಎಂದು ಪೊಲೀಸ್ ಆಯುಕ್ತರಿಗೆ ಚಾಟಿ ಬೀಸಿದೆ. ಈ ಸಂಬಂಧ ವರದಿಯನ್ನು ನೀಡುವಂತೆ ಕೋರ್ಟ್ ಸೂಚನೆ ನೀಡಿದೆ.
Advertisement
ಬೆಂಗಳೂರು ನಗರದ ಸಾರ್ವಜನಿಕ ಪ್ರದೇಶದಲ್ಲಿ ಬ್ಯಾನರ್ ಹೆಚ್ಚಾಗಿತ್ತು. ರಸ್ತೆ ಗುಂಡಿಗಳಿಂದ ಸವಾರರು ಪರದಾಡುವಂತಾಗಿತ್ತು. ಈ ವಿಚಾರವಾಗಿ ಹೈಕೋರ್ಟ್ ಬಿಬಿಎಂಪಿ ವಿರುದ್ಧ ಚಾಟಿ ಬೀಸಿತ್ತು.