ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಪೀಕರ್ ಆಯ್ಕೆ ಪ್ರಕ್ರಿಯೆಯ ಸುತ್ತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ತೀವ್ರ ಕುತೂಹಲಕರ ಮತ್ತು ನಾಟಕೀಯ ಬೆಳವಣಿಗೆಗಳು ನಡೆದಿವೆ.
ಸರ್ಕಾರದ ಮಟ್ಟದಲ್ಲಿ ಹಾಗೂ ಪಕ್ಷದ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ಬಾರೀ ಕಸರತ್ತು ನಡೆದಿದ್ದು, ಕೇವಲ ಕೆಲವೇ ಗಂಟೆಗಳಲ್ಲಿ ಮೂರು ಬಾರಿ ಸಚಿವರ ಮತ್ತು ಸ್ಪೀಕರ್ ಅಭ್ಯರ್ಥಿಗಳ ಪಟ್ಟಿ ಬದಲಾಗಿದೆ.
ಬೆಳಿಗ್ಗೆ ಮುಖ್ಯಮಂತ್ರಿಗಳು ಸ್ಪೀಕರ್ ಅಭ್ಯರ್ಥಿಯಾಗಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಪತ್ರ ರವಾನಿಸಿದ್ದರು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಎಐಸಿಸಿ (AICC) ಕಡೆಯಿಂದ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಶಿಫಾರಸು ಮಾಡುವ ಮೂಲಕ ಅಚ್ಚರಿ ಮೂಡಿಸಲಾಯಿತು.
ಎಐಸಿಸಿ ಬಿಡುಗಡೆ ಮಾಡಿದ ಮೊದಲ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಪ್ರಕಟವಾಗಿತ್ತು. ಆದರೆ ನಂತರದ ರಾಜಕೀಯ ಬೆಳವಣಿಗೆಯಲ್ಲಿ, ಮಂಕಾಳು ವೈದ್ಯ ಅವರ ಸ್ಥಾನದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಅವಕಾಶ ಕಲ್ಪಿಸಿ ಎರಡನೇ ಪಟ್ಟಿಯನ್ನು ಹೊರಡಿಸಲಾಯಿತು. ಇದನ್ನೂ ಓದಿ: ಸಂಭ್ರಮದ ಬೆನ್ನಲ್ಲೇ ಶಾಕ್ – ಗಾಯತ್ರಿ ಶಾಂತೇಗೌಡ ಮಂತ್ರಿ ಸ್ಥಾನ ಕೈತಪ್ಪುವ ಆತಂಕ
ಸಂಪುಟ ವಿಸ್ತರಣೆಯ ಅಧಿಕೃತ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್ ಅಂಗಳದಲ್ಲಿ ಆಂತರಿಕ ಅಸಮಾಧಾನ ಮತ್ತು ಗೊಂದಲಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.
