ಬೆಂಗಳೂರು: ಕಾರ್ಯಕರ್ತನ ಮೇಲೆ ಟ್ರಾಫಿಕ್ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಕಾಂಗ್ರೆಸ್ ಕಾರ್ಯಕರ್ತರೆಲ್ಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಶಿವಾಜಿನಗರದಲ್ಲಿ ನಡೆದಿದೆ.
ಚರ್ಚ್ ರಸ್ತೆಯಲ್ಲಿ ಸಂಚಾರ ಪೊಲೀಸರು ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತೆರವು ಕಾರ್ಯ ಮಾಡುತ್ತಿದ್ದರು. ಈ ವೇಳೆ ಆ ಏರಿಯಾದ ಕಾಂಗ್ರೆಸ್ ಮುಖಂಡರು ಸ್ಥಳಕ್ಕೆ ಆಗಮಿಸಿ ವ್ಯಾಪಾರಸ್ಥರ ಪರವಾಗಿ ಮಾತನಾಡಿದ್ದಾರೆ.
Advertisement
Advertisement
ಈ ಸಂದರ್ಭದಲ್ಲಿ ಪರಸ್ಪರ ಇಬ್ಬರ ನಡುವೆ ವಾಗ್ವಾದ ನಡೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಸಾದಿಕ್ ಎಂಬಾತನ ಮೇಲೆ ಪೊಲೀಸರು ಹೊಡೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಘಟನೆ ಬಳಿಕ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಶಿವಾಜಿನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
Advertisement
ಪ್ರತಿಭಟನೆಯನ್ನು ನಿಯಂತ್ರಿಸುವ ಸಂದರ್ಭದಲ್ಲಿ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ. ಸದ್ಯಕ್ಕೆ ಪೊಲೀಸ್ ಠಾಣೆಯ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=IpETJy-IqIA