ಮಂಡ್ಯ: ಹೈವೋಲ್ಟೇಜ್ ಕ್ಷೇತ್ರ ಮಂಡ್ಯ ಮತ ಎಣಿಕೆ ಕೇಂದ್ರದ ಬಳಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಮತ ಎಣಿಕೆ ಕೇಂದ್ರದ ಬಳಿ ಬ್ಯಾರಿಕೇಡ್ ರೀತಿ ಮರದ ಕಂಬಗಳನ್ನು ನೆಡಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸಿದ್ದರಿಂದ ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಇಬ್ಬರು ಅಭ್ಯರ್ಥಿಗಳು ಕೂಡ ಜಿದ್ದಾಜಿದ್ದಿನ ಪ್ರಚಾರ ನಡೆಸಿದ್ದರು.
Advertisement
Advertisement
ಇದೀಗ ಮತ ಎಣಿಕೆಯ ದಿನವೂ ಮತ ಎಣಿಕಾ ಕೇಂದ್ರದ ಬಳಿ ಬೃಹತ್ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಮತ ಎಣಿಕಾ ಕೇಂದ್ರ ಬಳಿ ಸಂಪೂರ್ಣ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಹೆಚ್ಚಿನ ಜನ ಸೇರಿದಾಗ ನೂಕು ನುಗ್ಗಲು ಆಗದಂತೆ ಬ್ಯಾರಿಕೇಡ್ ರೀತಿ ಮರದ ಕಂಬಗಳನ್ನು ಈಗಾಗಲೇ ನೆಡಲಾಗಿದೆ.
Advertisement
ಒಂದು ವೇಳೆ ಗಲಾಟೆ ಆದರೂ ಒಮ್ಮೆಲೆ ಹೆಚ್ಚು ಜನ ನುಗ್ಗದಂತೆ ಜನ ಪ್ರತ್ಯೇಕವಾಗಿ ನಿಲ್ಲುವಂತೆ ಮಧ್ಯೆ ಮಧ್ಯೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗುತ್ತಿದೆ.