ಹುಬ್ಬಳ್ಳಿ: ವಾಣಿಜ್ಯ ನಗರಿಯ ಹೈಟೆಕ್ ಕೋರ್ಟ್ ಸಂಕೀರ್ಣ ಉದ್ಘಾಟನೆ ಮಾಡಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಇಂದು ಆಗಮಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನ ನಿಲ್ದಾಣದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಸಿಜೆ ದೀಪಕ್ ಮಿಶ್ರಾ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದ ಹಳೇ ಗೇಟ್ ನಿಂದ ನಗರದ ಖಾಸಗಿ ಹೋಟೆಲ್‍ಗೆ ಆಗಮಿಸಿದ್ದಾರೆ. ದಿನೇಶ್ ಮಾಹೇಶ್ವರಿ ಹಾಗೂ ಜಿಲ್ಲಾಡಳಿತದಿಂದ ದೀಪಕ್ ಮಿಶ್ರಾರವರನ್ನು ರಾಜ್ಯ ಉಚ್ಛ ನ್ಯಾಯಲಯದ ನ್ಯಾಯಮೂರ್ತಿ ಸ್ವಾಗತಿಸಿ ಬರಮಾಡಿಕೊಂಡರು.
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ದೀಪಕ್ ಮಿಶ್ರಾ ಜೊತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಮೋಹನ್ ಶಾಂತನಗೌಡರ್, ಎಸ್ ಅಬ್ದುಲ್ ನಜೀರ್ ಕೂಡಾ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದಾರೆ. ಇದನ್ನು ಓದಿ: ಏಷ್ಯಾದ ವಿಶಿಷ್ಟ ನ್ಯಾಯಾಲಯ ಸಂಕೀರ್ಣ ಭಾನುವಾರ ಹುಬ್ಬಳ್ಳಿಯಲ್ಲಿ ಲೋಕಾರ್ಪಣೆ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews