ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.
ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ದಂಧೆ ನಡೆಸುತ್ತಿದ್ದ, ಹೊರರಾಜ್ಯಗಳಿಂದ ಯುವತಿಯರನ್ನ ಕರೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ (Bellary Jail) ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸದನದೊಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಬಸವರಾಜ ಹೊರಟ್ಟಿ
Advertisement
Advertisement
ಆರೋಪಿ ಸಿಕ್ಕಿಬಿದ್ದದ್ದು ಹೇಗೆ?
ಕಳೆದ ಜನವರಿಯಲ್ಲೇ ಕೆ.ಆರ್ ಪುರದ ಟಿನ್ ಫ್ಯಾಕ್ಟರಿ ಬಳಿಯಿದ್ದ ನಿರ್ವಣ ಇಂಟರ್‌ನ್ಯಾಷನಲ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಥೈಲ್ಯಾಂಡ್ ಮಹಿಳೆಯರು ಸೇರಿದಂತೆ 44 ಮಹಿಳೆಯರನ್ನ ರಕ್ಷಣೆ ಮಾಡಲಾಗಿತ್ತು. ದಾಳಿ ಬಳಿಕ ಸ್ಪಾ ಅನ್ನು ಬಂದ್ ಮಾಡಲಾಗಿತ್ತು. ಇದನ್ನೂ ಓದಿ: ವೈಟ್ ಹೌಸ್ AI ವಿಭಾಗದ ನೀತಿ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ್ ಕೃಷ್ಣನ್ ನೇಮಕ
Advertisement
Advertisement
ಇನ್ನೂ ಆರೋಪಿಯು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಿಂದ ಯುವತಿಯರನ್ನ ಕರೆಸುತ್ತಿದ್ದ. ಬೆಂಗಳೂರಿನಲ್ಲಿ ಕೆಲಸಕ್ಕೆಂದು ಕರೆಸಿ ಬಂದು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಅನಿಲ್ ರೆಡ್ಡಿ ವಿರುದ್ಧ ರೇಪ್ ಸೇರಿ ಇತರೇ ಪ್ರಕರಣಗಳು ದಾಖಲಾಗಿದ್ದರಿಂದ, ಮಹದೇವಪುರ ಪೊಲೀಸರು ಗೂಂಡಾ ಕಾಯ್ದೆ ರಿಪೋರ್ಟ್ ತಯಾರಿಸಿದ್ದರು. ವರದಿ ಆಧರಿಸಿ ಪೊಲೀಸ್ ಆಯುಕ್ತರು ಅನಿಲ್ ರೆಡ್ಡಿ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಪೊಲೀಸರು ಕಂಪ್ಲೀಟ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ನದಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ – ಇಂದು ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು