ಕೋಲಾರ: ಕನ್ನಡದ ಭಗವದ್ಗೀತೆ ಎಂದೇ ಕರೆಯಲಾಗುವ ಮಂಕುತಿಮ್ಮನ ಕಗ್ಗ ಬರೆದ ಡಿವಿಜಿ (DVG) ಅವರ ನಿವಾಸಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದ್ದು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡಕ್ಕೆ ಹೊಸ ಮೆರುಗು ಬಂದಿದೆ.
ಡಿವಿಜಿಯವರು (DV Gundappa) ವಾಸವಿದ್ದ ಮುಳಬಾಗಿಲಿನ (Mulabagilu) ನಿವಾಸವನ್ನು ಸರ್ಕಾರ ಶಾಲೆಯನ್ನಾಗಿ (School) ಮಾಡಿತ್ತು. ಆದರೆ ಸರಿಯಾದ ನಿರ್ವಹಣೆ ಇಲ್ಲದೇ ಶಾಲೆ ಸಂಪೂರ್ಣವಾಗಿ ಶಿಥಿಲವಾಗಿತ್ತು. ಈಗ ಓಸ್ಯಾಟ್ ಸಂಸ್ಥೆ ಕಳೆದ ಒಂದುವರೆ ವರ್ಷದ ಹಿಂದೆ ಈ ಶಾಲೆಯನ್ನು ಹೊಸದಾಗಿ ನಿರ್ಮಾಣ ಮಾಡಲು ಮುಂದಾಗಿತ್ತು. 2.75 ಕೋಟಿ ರೂ. ವೆಚ್ಚದಲ್ಲಿ ಹಲವು ದಾನಿಗಳ ನೆರವಿನಿಂದ ನಿರ್ಮಾಣ ಮಾಡಿ ಇಡೀ ರಾಜ್ಯದಲ್ಲೇ ಮಾದರಿಯಾದ ಶಾಲೆಯನ್ನಾಗಿ ನಿರ್ಮಾಣ ಮಾಡಿ ಕೊಟ್ಟಿದೆ. ಹೊರಗಿನಿಂದ ಶಾಲೆ ಯಾವುದೇ ಸುಂದರ ಬಂಗಲೆಗೂ ಕಡಿಮೆ ಇಲ್ಲದಂತೆ ನಿರ್ಮಾಣ ಮಾಡಲಾಗಿದ್ದು, ಬುಧವಾರ ಶಾಲೆಯ ಉದ್ಘಾಟನೆಯಾಗಿದೆ. ಇದನ್ನೂ ಓದಿ: Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!
ಇದೇ ವೇಳೆ ಮಾತನಾಡಿದ ಶಾಸಕ ಸಮೃದ್ಧಿ ಮಂಜುನಾಥ್ ಸರ್ಕಾರಗಳು ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜೊತೆಗೆ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದಿದ್ದಾರೆ.
ಇವತ್ತಿನ ಕಾಲಕ್ಕೆ ಸರಿದೂಗುವಂತೆ ಅತ್ಯಾಧುನಿಕ ಪೀಠೋಪಕರಣಗಳು, ಸಿಸಿಟಿವಿ, ಹತ್ತು ಕೊಠಡಿಗಳು, ವ್ಯವಸ್ಥಿತ ಶೌಚಾಲಯ, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಶಿಕ್ಷಕರ ಪ್ರತ್ಯೇಕ ಕೊಠಡಿ ಸೇರಿದಂತೆ ಎಲ್ಲವೂ ಈ ನೂತನ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ನಾನಾ ಕಾರಣಗಳಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಇವತ್ತಿನ ದಿನಗಳಲ್ಲಿ ರಾಜ್ಯದಲ್ಲೇ ಮಾದರಿ ಆಗಬಲ್ಲ ಸರ್ಕಾರಿ ಶಾಲಾ ಕಟ್ಟಡ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಕಾರ್ಯಕ್ರಮದಲ್ಲಿ ಸಿನಿಮಾ ನಟ ರಮೇಶ್ ಅರವಿಂದ್, ಹಾಸ್ಯ ನಟರಾದ ಗಂಗಾವತಿ ಪ್ರಾಣೇಶ್, ಬಸವರಾಜ್ ಮಹಾಮನಿ, ಕೋಲಾರ ಜಿಲ್ಲಾಧಿಕಾರಿ, ಜಿಲ್ಲಾರಕ್ಷಣಾಧಿಕಾರಿ ಹೀಗೆ ಹಲವು ಗಣ್ಯರು ಆಗಮಿಸಿದ್ದರು. ನೂತನ ಕಟ್ಟಡದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಮಕ್ಕಳು ಸಂಭ್ರಮಿಸಿದರು. ಇದನ್ನೂ ಓದಿ: ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ
Web Stories