ಬೆಂಗಳೂರು: ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (Bengaluru) ಸದ್ಯ ಹಾಟ್ ಸಿಟಿ ಆಗಿ ಬದಲಾಗಿದೆ. ಎಂಥಾ ಬಿಸಿಲಪ್ಪ ಅಂತ ಸಿಟಿ ಜನ ಶಾಪ ಹಾಕೋಕೆ ಶುರು ಮಾಡಿದ್ದಾರೆ. ಹೀಗಾಗಿ ಉರಿಯುವ ಬಿಸಿಲಿನಿಂದ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.
Advertisement
ದಿನದಿಂದ ದಿನಕ್ಕೆ ಬೆಂಗಳೂರಿನ ತಾಪಮಾನ ಹೆಚ್ಚಾಗ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ರಾಜ್ಯಕ್ಕೆ ಹೀಟ್ ವೇವ್ ಎಚ್ಚರಿಕೆ ನೀಡಿದೆ. ಬೇಸಿಗೆಯ ಬೇಗೆ ಅಂದುಕೊಂಡಿದ್ದಕ್ಕಿಂತ ಈ ಸಲ ಜಾಸ್ತಿನೇ ಇದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ, ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಬದಲಾಗಿದೆ. ಬಿರು ಬಿಸಿಲಿಗೆ ನಗರದ ಜನ ಬಸವಳಿದು ಹೋಗಿದ್ದಾರೆ. ರಾಜ್ಯ ಸೇರಿ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ (Temperature) ಏರಿಕೆ ಕಂಡಿದ್ದು, ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Advertisement
ಬೆಳಗ್ಗೆ 11 ರಿಂದ ಸಂಜೆ 4ರ ವರೆಗೆ ಎಚ್ಚರ:
ಮುಂದಿನ ದಿನಗಳಲ್ಲಿ ಇದೇ ರೀತಿಯ ಗರಿಷ್ಠ ಬಿಸಿಲು ಇರಲಿದೆ. ಹಾಗಾಗಿ ಕೆಲ ದಿನ ತಾಪಮಾನ ಇಳಿಕೆಯವರೆಗೂ ಬೆಳಗ್ಗೆ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
Advertisement
Advertisement
ಯಾರು ಎಚ್ಚರ ವಹಿಸಬೇಕು?
ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆಯು 40 ಡಿಡ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಾದರೆ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆಗಳೂ ಇವೆ. ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆಯಿಂದ ಸಲಹೆ ನೀಡಿದೆ.
108/102 ಸಹಾಯವಾಣಿಗೆ ಕರೆ ಮಾಡಿ:
ದೇಹದಲ್ಲಿ ತಾಪಮಾನ ಏರಿಕೆಯಿಂದ ನಿರ್ಜಲೀಕರಣ ಹಾಗೂ ಉಸಿರಾಟದ ಸಮಸ್ಯೆ ಎದುರಾಗಲಿದೆ. ಹಾಗಾಗಿ ನೀರು, ಮಜ್ಜಿಗೆ, ಫ್ರೆಶ್ ಫ್ರೂಟ್ ಜ್ಯೂಸ್, ದೇಹಕ್ಕೆ ತಂಪು ನೀಡುವ ಹಣ್ಣುಗಳನ್ನು ಹೆಚ್ಚು-ಹೆಚ್ಚು ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಯಾರದರೂ ಹೆಚ್ಚಿದ ಉಷ್ಣಾಂಶ ಹಾಗೂ ಪ್ರಜ್ಞೆ ತಪ್ಪುವ ಸ್ಥಿತಿಯಲ್ಲಿದ್ದರೆ ಬೆವರುವಿಕೆ ಸ್ಥಗಿತವಾದ್ರೆ ಸಹಾಯವಾಣಿ ಸಂಖ್ಯೆ: 108/102ಗೆ ಕರೆ ಮಾಡುವಂತೆ ಆರೋಗ್ಯ ಇಲಾಖೆ ತಿಳಿಸಿದೆ.