ಭುವನೇಶ್ವರ: ಒಡಿಶಾದಲ್ಲಿ (Odisha) ಬಿಸಿಲಿನ ತಾಪ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಹೀಟ್‌ಸ್ಟ್ರೋಕ್‌ಗೆ (Heatstroke) 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶುಕ್ರವಾರದಿಂದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 99 ಶಂಕಿತ ಸನ್‌ಸ್ಟ್ರೋಕ್ ಸಾವುಗಳು ವರದಿಯಾಗಿವೆ. ಮರಣೋತ್ತರ ಪರೀಕ್ಷೆ ಮತ್ತು ವಿಚಾರಣೆಯ ಬಳಿಕ 20 ಸನ್‌ಸ್ಟ್ರೋಕ್ ಸಾವುಗಳು ಎಂದು ದೃಢಪಡಿಸಲಾಗಿದೆ. ಉಳಿದವರು ಇತರ ಕಾರಣಗಳಿಂದ ಸಾವನ್ನಪ್ಪಿದ್ದು, ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ಅಧಿಕೃತ ವರದಿ ಹೇಳಿದೆ. ಇದನ್ನೂ ಓದಿ: ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ದಾಖಲೆ – Zerodha, CDSL ಸರ್ವರ್ ಡೌನ್, ಹೂಡಿಕೆದಾರರ ಆಕ್ರೋಶ
Advertisement
Advertisement
ಇದಕ್ಕೂ ಮೊದಲು 42 ಶಂಕಿತ ಸನ್‌ಸ್ಟ್ರೋಕ್ ಸಾವುಗಳು ವರದಿಯಾಗಿದ್ದು, ಅವುಗಳಲ್ಲಿ ಆರು ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆರು ಸಾವುಗಳು ಇತರ ಕಾರಣಗಳಿಂದ ಸಂಭವಿಸಿವೆ ಎನ್ನಲಾಗಿದೆ. ಬೋಲಂಗಿರ್, ಸಂಬಲ್‌ಪುರ್, ಝಾರ್ಸುಗುಡಾ, ಕಿಯೋಂಜರ್, ಸೋನೆಪುರ್, ಸುಂದರ್‌ಗಢ್ ಮತ್ತು ಬಾಲಸೋರ್ ಜಿಲ್ಲೆಗಳಲ್ಲಿ ಸಾವುಗಳು ಹೆಚ್ಚಾಗಿ ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್ ಟಾಪ್ ಕಮಾಂಡರ್ಸ್
Advertisement
ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ ಮತ್ತು ವಿಶೇಷ ಪರಿಹಾರ ಆಯುಕ್ತ ಸತ್ಯಬ್ರತ ಸಾಹು ಅವರು ಭಾನುವಾರ ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿ ಬಿಸಿಗಾಳಿಯ ಕುರಿತು ಸೂಚನೆಗಳನ್ನು ಜಾರಿಗೊಳಿಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಗಾಳಿ, ಮಳೆ ರಭಸಕ್ಕೆ ಭಾರೀ ಗಾತ್ರದ ಮರ ನೆಲಸಮ – ಸ್ಯಾಂಟ್ರೋ ಕಾರು ಜಖಂ
Advertisement
ಮೃತ ಕುಟುಂಬಕ್ಕೆ ಪರಿಹಾರ ಮಂಜೂರಾತಿಗಾಗಿ ಪ್ರತಿ ಸಾವಿನ ಮರಣೋತ್ತರ ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲೆಗಳಿಗೆ ತಿಳಿಸಲಾಗಿದೆ. ಅಲ್ಲದೆ ಪ್ರತಿ ಸಾವಿಗೆ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಕಂದಾಯ ಅಧಿಕಾರಿ ಮತ್ತು ಸ್ಥಳೀಯ ವೈದ್ಯಾಧಿಕಾರಿ ಜಂಟಿ ವಿಚಾರಣೆ ನಡೆಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ