ರಾಯಚೂರಿನಲ್ಲಿ ಹೆಚ್ಚಿದ ತಾಪಮಾನ – 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ ಅವಘಡ

Public TV
1 Min Read
raichur fire accident

ರಾಯಚೂರು: ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನದಿಂದ ಜನ ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ (Electricity Supply) ಏರುಪೇರಾಗಿ ನಗರದ 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.

ಅಗ್ನಿ ಅವಘಡದಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಕರಕಲಾಗಿವೆ. ಮೂರು ಟಿ.ಸಿಗಳು ಸುಟ್ಟಿದ್ದರಿಂದ ಇಡೀ ರಾಯಚೂರು ನಗರಕ್ಕೆ ವಿದ್ಯುತ್ ಸರಬರಾಜು ಬಂದ್ ಆಗಿತ್ತು. ವಿದ್ಯುತ್ ಕೇಂದ್ರದಲ್ಲಿನ ಕೇಬಲ್‌ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ನಿರಂತರ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ

Raichur Fire Accident

ವಿದ್ಯುತ್ ಇಲ್ಲದೆ ರಾತ್ರಿಯೆಲ್ಲಾ ಬಿಸಿಲನಾಡಿನ ಜನರು ಸೆಕೆಯನ್ನು ತಾಳದೆ ಜಾಗರಣೆ ಮಾಡಿದ್ದಾರೆ. ವಿದ್ಯುತ್ ಕೇಂದ್ರದಲ್ಲಿ ದುರಸ್ತಿ ಕಾರ್ಯ ನಡೆದಿದ್ದು ವಿದ್ಯುತ್ ಸರಬರಾಜು ಆರಂಭಿಸಿದ್ದಾರೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಳಾಗಿವೆ. ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 42.6 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದ್ದು, ಪ್ರತಿದಿನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರುವುದರಿಂದ ಬಿಸಿಲನಾಡಿನ ಜನ ತತ್ತರಿಸಿದ್ದಾರೆ. ಇದನ್ನೂ ಓದಿ: ಕೆ.ವಿ ಗೌತಮ್‌ಗೆ ಕೋಲಾರ ಕಾಂಗ್ರೆಸ್ ಟಿಕೆಟ್

Share This Article