ದೆಹಲಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ, ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆಯಿಂದ ದೇಶದಲ್ಲಿ ಧಂಗೆ ಆರಂಭವಾಗಿದೆ. ಈ ಮೂಲಕ ದ್ವೇಷದ ಭಾವನೆ ಹೆಚ್ಚುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
Advertisement
ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿದ ಅವರು, ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ನೂಪುರ್ ಶರ್ಮಾ ವಿರುದ್ಧ ಮುಸ್ಲಿಂ ಸಮುದಾಯದವರು ಪ್ರತಿಭಟನೆ ಆರಂಭಿಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಇದರಿಂದಾಗಿ ಭಾರತ ಮತ್ತು ಮುಸ್ಲಿಂ ರಾಷ್ಟ್ರಗಳೊಂದಿಗೆ ಕೆಲ ವರ್ಷಗಳಿಂದ ಬೆಳೆದಿದ್ದ ಉತ್ತಮ ಸಂಬಂಧಕ್ಕೆ ಹೊಡೆತ ಬಿದ್ದಿದೆ. ಇದೀಗ ಈ ಬಗ್ಗೆ ಮೋದಿ ಮಾತನಾಡುವ ಅಗತ್ಯವಿದೆ ಎಂದರು. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್
Advertisement
Advertisement
ಮುಸ್ಲಿಂ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧಗಳೊಂದಿಗೆ ದೇಶ ಪ್ರಗತಿಯತ್ತ ಮುನ್ನುಗ್ಗುತ್ತಿದ್ದಂತೆ ಈ ರೀತಿಯ ವರ್ತನೆಗಳು ಸರಿಯಲ್ಲ. ಇದರಿಂದ ದೇಶದ ಪ್ರಗತಿಗೆ ಅಪಾಯ. ಇಂತಹ ಹೇಳಿಕೆಗಳನ್ನು ಕೊಟ್ಟು ದೇಶದಲ್ಲಿ ಆಗುತ್ತಿರುವ ಅನಾಹುತಗಳ ಬಗ್ಗೆ ಮೋದಿ ಗಮನಿಸುತ್ತಿರಬಹುದು. ಈ ಬಗ್ಗೆ ಕೂಡಲೇ ಮೋದಿ ಸಾರ್ವಜನಿಕವಾಗಿ ಮಾತನಾಡಬೇಕು. ಈ ಮೂಲಕ ಈ ಸಮಸ್ಯೆಗೊಂದು ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್
Advertisement
ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ವಿವಾದತ್ಮಕ ಹೇಳಿಕೆ ಖಂಡಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ದೇಶದ ವಿವಿಧೆಡೆ ಹೊತ್ತಿ ಉರಿದಿದ್ದ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಸೇರಿ ಹಲವು ರಾಜ್ಯಗಳಲ್ಲಿ ಗಲಭೆಕೋರರ ವಿರುದ್ಧ ಕಠಿಣ ಸೆಕ್ಷನ್‍ಗಳ ಅನ್ವಯ ಕೇಸ್ ದಾಖಲಿಸಲಾಗಿದೆ.