ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಬಿಬಿಎಂಪಿಯ ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
Advertisement
ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಆದರೆ ನೀವು ಮುಚ್ಚುವ ರಸ್ತೆಗುಂಡಿಗಳು, ದುರಸ್ತಿಪಡಿಸಿದ ರಸ್ತೆಗಳು ದೀರ್ಘಾವಧಿ ಬಾಳಿಕೆ ಏಕೆ ಬರುವುದಿಲ್ಲ ಪ್ರಶ್ನಿಸಿದೆ. ಗುಂಡಿಗಳನ್ನು ಮುಚ್ಚಲು ಯಾವ ತಂತ್ರಜ್ಞಾನ, ಯಾವ ಕಾರ್ಯವಿಧಾನ ಅನುಸರಿಸಲಾಗುತ್ತದೆ..?. ಇದಕ್ಕೆಲ್ಲ ಪಾಲಿಕೆ ಮುಖ್ಯ ಇಂಜಿನಿಯರ್ ಹೊಣೆಯಾಗುತ್ತಾರೆ. ಅವರನ್ನು ಕಂಬಿ ಹಿಂದೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಆರ್. ಅವಸ್ಥಿ ಚಾಟಿ ಬೀಸಿದ್ದಾರೆ.
Advertisement
Advertisement
ಇತ್ತ ಬೆಸ್ಕಾಂ, ಜಲಮಂಡಳಿ ಸೇರಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಮುಗಿಸದ ಪ್ರಾಧಿಕಾರಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಮುಂದಿನ ವಿಚಾರಣೆಗೆ ಪಾಲಿಕೆಯ ಮುಖ್ಯ ಇಂಜಿನಿಯರ್ ಖುದ್ದು ಹಾಜರಾಗಬೇಕು ಎಂದು ಸೂಚಿಸಿ, ಫೆಬ್ರವರಿ 7ಕ್ಕೆ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ, ರಾಮದಾಸ್ ಕಿತ್ತಾಟ- ಕಣ್ಣೀರಾಕಿದ ಮೇಯರ್