ಬೆಂಗಳೂರು: ವಿದೇಶ ಪ್ರಯಾಣಕ್ಕೆ ಅನುಮತಿ ನೀಡಬೇಕೆಂದು ಮೊರೆ ಹೋಗಿದ್ದ ನಲಪಾಡ್‍ಗೆ ಹೈಕೋರ್ಟ್ ಸೆಷನ್ಸ್ ಕೋರ್ಟ್‍ಗೆ ಹೋಗುವಂತೆ ಸೂಚಿಸಿದೆ.
15 ದಿನಗಳ ಕಾಲ ಲಂಡನ್ ಪ್ರವಾಸಕ್ಕೆ ಅನುಮತಿ ಕೋರಿ ಹೈಕೋರ್ಟ್ ಗೆ ನಲಪಾಡ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿದ್ವತ್ ಮೇಲೆ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳ ಸಡಿಲಿಕೆ ಕೋರಿ ಅನುಮತಿ ನೀಡಬೇಕೆಂದು ಮನವಿ ಮಾಡಲಾಗಿತ್ತು.
Advertisement
ನಲಪಾಡ್ ಸಹೋದರ ಲಂಡನ್ ನಲ್ಲಿ ವಾಸವಾಗಿದ್ದು, ಹೀಗಾಗಿ ತಮ್ಮನನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿ, 15 ದಿನಗಳ ಕಾಲ ವಿದೇಶಕ್ಕೆ ಪ್ರಯಾಣ ಬೆಳೆಸಲು ತನ್ನ ಕಕ್ಷೀದಾರರಿಗೆ ಅವಕಾಶ ನೀಡಬೇಕೆಂದು ವಕೀಲರು ಮನವಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿ ನ್ಯಾ. ಜಾನ್ ಮೈಕೆಲ್ ಡಿ. ಕುನ್ಹಾ ಈ ಬಗ್ಗೆ ಸೆಷನ್ಸ್ ನ್ಯಾಯಾಲಯಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
Advertisement
Advertisement
ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ನಗರ ಬಿಟ್ಟು ತೆರಳದಂತೆ ಷರತ್ತು ವಿಧಿಸಿ ಕೋರ್ಟ್ ನಲಪಾಡ್ ಗೆ ಜಾಮೀನು ಮಂಜೂರು ಮಾಡಿತ್ತು.
Advertisement
ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಸಿಬಿ ಪೊಲೀಸರು 600ಕ್ಕೂ ಹೆಚ್ಚು ಪುಠಗಳಿರುವ ಚಾರ್ಜ್‍ಶೀಟನ್ನು ನಗರದ ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv