ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ (Kempegowda Jayanti) ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಆಚೆ ಕಳುಹಿಸುವಂತೆ ಕುಮಾರಸ್ವಾಮಿ, ಸಂಸದ ಡಾ.ಕೆ ಸುಧಾಕರ್ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಆಕ್ರೋಶಿತರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ರು. ಇಷ್ಟಾದ್ರೂ ಗಲಾಟೆ ಮುಂದುವರೆದಿದೆ. ಕಾರ್ಯಕ್ರಮದಿಂದ ತಮ್ಮ ಬೆಂಬಲಿಗರೊಂದಿಗೆ ಹೊರ ನಡೆದ ಪ್ರದೀಪ್ ಈಶ್ವರ್ (Pradeep Eshwar) ವಿರೋಧಿಗಳಿಗೆ ತೊಡೆ ತಟ್ಟಿ ಪಂಥಾಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ (Chikkaballapura) ಕನ್ನಡ ಭವನದ ಮುಂದೆ ಹೈಡ್ರಾಮವೇ ಸೃಷ್ಟಿಯಾಗಿದೆ. ಒಕ್ಕಲಿಗ ಯುವಕರು, ಪ್ರದೀಪ್ ಈಶ್ವರ್ ಬೆಂಬಲಿಗರ ನಡುವೆ ಗಲಾಟೆ ತಾರಕಕ್ಕೆರಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವು
