ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಬೆಂಬಲಿಗರಿಗೆ ಭರ್ಜರಿ ಬಾಡೂಟ ಏರ್ಪಡಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರಕೊಪ್ಪಲಿನ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಾರೀ ಅಂತರದ ಗೆಲುವಿಗೆ ಕಾರಣರಾಗಿದ್ದ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಏರ್ಪಡಿಸಲಾಗಿದೆ. ಈ ವೇಳೆ ಸಮಾವೇಶಕ್ಕೆ ಆಗಮಿಸುವ ಕ್ಷೇತ್ರದ ಜನರಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಿದ್ದು, 25 ಸಾವಿರ ಮಂದಿಗೆ ಬಾಡೂಟ ಮತ್ತು 5 ಸಾವಿರ ಮಂದಿಗೆ ಸಸ್ಯಹಾರಿ ಊಟದ ತಯಾರಿಸಲಾಗಿದೆ. ಬಾಡೂಟಕ್ಕಾಗಿ ನಾಲ್ಕು ಸಾವಿರ ಕೆಜಿ ಮಟನ್, ಮೂರು ಸಾವಿರ ಕೆಜಿ ಚಿಕನ್ ಬಳಕೆ ಮಾಡಲಾಗಿದೆ. ಊಟದ ಮೆನುವಿನಲ್ಲಿ ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು ಸಿದ್ಧಗೊಳಿಸಲಾಗಿದೆ.
Advertisement
ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಜಿಟಿ ದೇವೇಗೌಡ ಅವರು, 36 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಚುನಾವಣೆ ವೇಳೆ ಪ್ರಚಾರಕ್ಕೆ ಚಾಲನೆ ನೀಡಿದ್ದ ಸ್ಥಳದಲ್ಲೇ ಕೃತಜ್ಞತಾ ಸಮಾವೇಶ ಏರ್ಪಡಿಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.
Advertisement
Advertisement
ಮಾಜಿ ಸಿಎಂ ಗೆ ಟಾಂಗ್: ಕಾರ್ಯಕ್ರಮದಲ್ಲಿ ಮಾತನಾಡಿದ ಜಿಟಿಡಿ, ನನಗೆ ಬಂದ ಮತಗಳ ಅಂತರದಿಂದ ಪ್ರಧಾಣಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದಾರೆ. ಭಾರತದ ಭೂಪಟದಲ್ಲಿ ಈ ಚುನಾವಣೆಯನ್ನು ದಾಖಲಾಗುವಂತೆ ಮಾಡಿದ್ದೀರಿ. ಸಾರ್ವಜನಿಕ ಸೊಸೈಟಿಯಲ್ಲಿ ಅಕ್ಕಿ ತೂಕ ಮಾಡುತ್ತಿದ್ದ ನನ್ನನ್ನು ಈ ಸ್ಥಾನಕ್ಕೆ ತಂದಿದ್ದು ನೀವು. ಐದು ವರ್ಷ ಚಾಮುಂಡೇಶ್ವರಿ ಕ್ಷೇತ್ರದ ಜನ ಬಹಳ ಕಿರುಕುಳ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಎನ್ನುವ ಕಾರಣಕ್ಕೆ ಅವರ ಬೆಂಬಲಿಗರು ನಮ್ಮ ಜನರಿಗೆ ಕೊಡಬಾರದ ಕಷ್ಟ ಕೊಟ್ಟಿದ್ದಾರೆ. ನಮ್ಮ ಜನರ ಮೇಲೆ ಇಲ್ಲ ಸಲ್ಲದ ಕೇಸ್ ದಾಖಲಿಸಿದ್ದಾರೆ. ಕ್ಷೇತ್ರಕ್ಕೆ ಸಂಬಂಧಪಡದವರು ಗುದ್ದಲಿ ಪೂಜೆ ಮಾಡಿದ್ದಾರೆ. ಇದೆಲ್ಲವನ್ನು ಸುಮ್ಮನೆ ಸಹಿಸಿದ್ದೇನೆ. ಕೆಲವೊಮ್ಮೆ ಮನೆಯಲ್ಲಿ ಕುಳಿತು ಕಣ್ಣೀರು ಹಾಕಿದ್ದೇನೆ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು.