– ಉನ್ನತ ಶಿಕ್ಷಣ ಸಚಿವ ಸುಧಾಕರ್‌ರಿಂದ ಶೈಕ್ಷಣಿಕ ಮೇಳ ಉದ್ಘಾಟನೆ
ಬೆಂಗಳೂರು: ಪಬ್ಲಿಕ್ ಟಿವಿ (Public TV) ಪ್ರಸ್ತುತಪಡಿಸಿರುವ ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳವಾದ ವಿದ್ಯಾಪೀಠ (Vidhyapeeta Education Expo) 6ನೇ ಆವೃತ್ತಿಗೆ ಇಂದು (ಶನಿವಾರ) ಅದ್ಧೂರಿ ಚಾಲನೆ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ (M.C.Sudhakar) ಅವರು ಟೇಪ್ ಕಟ್ ಮಾಡುವ ಮೂಲಕ ಶೈಕ್ಷಣಿಕ ಮೇಳೆಕ್ಕೆ ಚಾಲನೆ ನೀಡಿದರು.
Advertisement
ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಸುಧಾಕರ್ ಅವರಿಗೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ (HR Ranganath) ಅವರು ಸೇರಿದಂತೆ ಇತರೆ ಗಣ್ಯರು ಸಾಥ್ ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಹೆಚ್.ಆರ್. ರಂಗನಾಥ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುತ್ತಿರುವ ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ
Advertisement
Advertisement
ಇದೇ ವೇಳೆ ಮಾತನಾಡಿದ ಸಚಿವ ಸುಧಾಕರ್ ಅವರು, ನಾನು ಸಚಿವನಾಗಿ ಉದ್ಘಾಟಿಸಿದ ಮೊದಲ ಕಾರ್ಯಕ್ರಮ ಇದು. ಇದು ನನ್ನ ಸೌಭಾಗ್ಯ ಎಂದು ಸಂತೋಷ ವ್ಯಕ್ತಪಡಿಸಿದರು.
Advertisement
ಪಬ್ಲಿಕ್ ಟಿವಿ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಬಹಳಷ್ಟು ಹೊಸ ಆಯಾಮಗಳನ್ನ ಪ್ರಾರಂಭ ಮಾಡಲಾಗಿದೆ. ಒಂದೇ ಸೂರಿನಡಿಯಲ್ಲಿ ಇಷ್ಟು ದೊಡ್ಡ ಶೈಕ್ಷಣಿಕ ಸಂಸ್ಥೆಗಳನ್ನು ಒಗ್ಗೂಡಿಸೋದು ಸುಲಭವಲ್ಲ. ಯಾರು ಕೂಡಾ ಇಂತಹ ದೊಡ್ಡ ಕಾರ್ಯಕ್ರಮ ಆಯೋಜಿಸಲು ಸಾಧ್ಯವಿಲ್ಲ. ಅದು ಪಬ್ಲಿಕ್ ಟಿವಿ, ಹೆಚ್.ಆರ್. ರಂಗನಾಥ್ ಅವರಿಂದ ಮಾತ್ರ ಸಾಧ್ಯ ಎಂದು ಬಣ್ಣಿಸಿದರು. ಇದನ್ನೂ ಓದಿ: ಇಂದು, ನಾಳೆ 2 ದಿನ ಪಬ್ಲಿಕ್ ಟಿವಿ ‘ವಿದ್ಯಾಪೀಠʼ – ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ
ಹಿರಿಯರ ಮಾರ್ಗದರ್ಶನ, ಗುರುಗಳ ಸಲಹೆ-ಸೂಚನೆ ಮೇಲೆ ಜೀವನದ ಕಷ್ಟ ಸುಖಗಳ ಬಗ್ಗೆ ಸಲಹೆ ಪಡೆದು ಜೀವನ ಮಾಡ್ತೀವಿ. ನಮ್ಮ ಮುಂದೆ ಅನೇಕ ಆಯ್ಕೆಗಳು ಇವೆ. ಮೆಡಿಕಲ್, ಎಂಜಿನಿಯರಿಂಗ್ ಶಿಕ್ಷಣದಲ್ಲಿ ನಮಗೆ ಅವಕಾಶಗಳು ಸಾಕಷ್ಟಿವೆ. ಪದವಿ ಪಡೆದರೂ ಕೆಲಸ ಸಿಕ್ತಿಲ್ಲ. ನಮ್ಮ ರಾಜ್ಯದಲ್ಲಿ, ದೇಶದಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು ಇವೆ. ಆದರೆ ಎಲ್ಲರಿಗೂ ಅಲ್ಲಿ ಉದ್ಯೋಗ ಸಿಗೋದಿಲ್ಲ. ನಾವು ನಿರೀಕ್ಷೆ ಮಾಡಿದಷ್ಟು ಉದ್ಯೋಗ ಸೃಷ್ಟಿ ಆಗಿಲ್ಲ. ಹೀಗಾಗಿ ಹೊಸ ಹೊಸ ಕೋರ್ಸ್ಗಳು ನಮ್ಮ ಮುಂದೆ ಇವೆ. ಇದಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಉನ್ನತ ಶಿಕ್ಷಣ ಇಲಾಖೆ ಹೊಸದು ನನಗೆ. ಮಾಹಿತಿ ಸಂಗ್ರಹ ಮಾಡುತ್ತಿದ್ದೇನೆ. ಈಗಾಗಲೇ ಅನೇಕ ವಿದ್ಯಾರ್ಥಿಗಳು ಸಮಸ್ಯೆಗಳನ್ನ ಹೇಳಿದ್ದಾರೆ. ಅನೇಕ ಖಾಸಗಿ, ಅಟಾನಮಸ್ ವಿವಿಗಳಲ್ಲಿ ಸಮಸ್ಯೆಗಳು ಇವೆ. ಸಮಸ್ಯೆಗಳನ್ನ ಹೇಗೆ ಪರಿಹಾರ ಮಾಡಬೇಕು ಅನ್ನೋ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ, On Spot ಗಿಫ್ಟ್ ಪಡ್ಕೊಳ್ಳಿ..!
ಎನ್‌ಇಪಿ ರದ್ದು ವಿಚಾರವಾಗಿ ಮಾತನಾಡಿ, ಎನ್‌ಇಪಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೊದಲು ಎನ್‌ಇಪಿ ಬಗ್ಗೆ ಪೂರ್ಣ ಮಾಹಿತಿ ಪಡೆಯುತ್ತೇನೆ. ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ತಗೋತೀವಿ. ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದೇ ಇರೊ ರೀತಿ ಕ್ರಮದ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಸ್ಪಷ್ಟಪಡಿಸಿದರು.
ಕಾರ್ಯಕ್ರಮದಲ್ಲಿ ರೇವಾ ಯುನಿವರ್ಸಿಟಿ ಕುಲಪತಿಗಳಾದ ಶ್ಯಾಮರಾಜು, ಗಾರ್ಡನ್ ಸಿಟಿ ಯುನಿವರ್ಸಿಟಿ ಕುಲಪತಿಗಳಾದ ಡಾ. ವಿ.ಜಿ ಜೋಸೆಫ್, ಕೇಂಬ್ರಿಡ್ಜ್ ಗ್ರೂಪ್ ಆಫ್ ಇನ್ಸ್ಟಿಟೂಷನ್ಸ್ ಅಧ್ಯಕ್ಷರಾದ ಡಿ.ಕೆ.ಮೋಹನ್, ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್ಟಿಟೂಷನ್ಸ್ ಅಧ್ಯಕ್ಷರಾದ ರಾಜೀವ್ ಗೌಡ ಭಾಗವಹಿಸಿದ್ದರು.
ಎಡಿ6 ಸಹಯೋಗದಲ್ಲಿ ಪಬ್ಲಿಕ್ ಟಿವಿಯು ‘ಇಂದಿನ ಕಲಿಕೆ, ನಾಳಿನ ದಾರಿದೀಪ’ ಘೋಷವಾಕ್ಯದೊಂದಿಗೆ ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳ ‘ವಿದ್ಯಾಪೀಠ’ವನ್ನು ಆಯೋಜಿಸಿದೆ. ಬೆಂಗಳೂರು ಅರಮನೆ ಮೈದಾನದ ಗೇಟ್ ನಂಬರ್ 4ರ ಗಾಯತ್ರಿ ವಿಹಾರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿದ್ಯಾಪೀಠ ಶೈಕ್ಷಣಿಕ ಮೇಳ ನಡೆಯಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವಿರುತ್ತದೆ. ಶೈಕ್ಷಣಿಕ ಮೇಳದಲ್ಲಿ ರಾಜ್ಯದ ನಾನಾ ಭಾಗಗಳ 100ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಂಡಿವೆ.