ನವದೆಹಲಿ: ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಟೀಂ ಇಂಡಿಯಾ (Team India) ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರಿಗೆ ಇಂದು (ನ.5) 35ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಅವರು ಅಪಾರ ದಾಖಲೆ ಮೂಲಕ ಕ್ರಿಕೆಟ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ 78 ಶತಕಗಳನ್ನ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 48 ಶತಕ ಸಿಡಿಸಿದ್ದು, ಸದ್ಯದಲ್ಲೇ 49ನೇ ಶತಕ ಸಿಡಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಶತಕ ದಾಖಲೆಯನ್ನು ಸರಿಗಟ್ಟುವ ಸನಿಹದಲ್ಲಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ ಅತಿಹೆಚ್ಚು ರನ್ ಗಳಿಸಿರುವ ಹೆಗ್ಗಳಿಕೆ ವಿರಾಟ್ ಕೊಹ್ಲಿಗೆ ಇದ್ದು, 115 ಪಂದ್ಯ ಆಡಿ 4,008 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿಹೆಚ್ಚು ದ್ವಿಶತಕ ಗಳಿಸಿದ ಆಟಗಾರರಲ್ಲಿ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದು, 7 ಬಾರಿ ದ್ವಿಶತಕ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‍ನಲ್ಲಿ ವೇಗವಾಗಿ 10,000 ರನ್ ಗಳಿಸಿರುವ ಕೊಹ್ಲಿ ಕ್ರಿಕೆಟ್ ದಂತಕತೆ ಸಚಿನ್ ದಾಖಲೆ ಮುರಿದಿದ್ದಾರೆ. ಈ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ನಾನು, ಧೋನಿ ಆತ್ಮೀಯ ಸ್ನೇಹಿತರಲ್ಲ: ಯುವರಾಜ್ ಸಿಂಗ್
Advertisement
Advertisement
2018ರಲ್ಲಿ ಐಸಿಸಿ ನೀಡುವ ಮೂರು ವಿಭಾಗದ 3 ಪ್ರಶಸ್ತಿಗಳನ್ನು ಪಡೆದಿದ್ದಾರೆ. ಈ ದಾಖಲೆ ಮಾಡಿರುವುದು ಕೊಹ್ಲಿ ಮಾತ್ರ. ಭಾರತದ ಪರ ಒಟ್ಟು 514 ಪಂದ್ಯ ಆಡಿರುವ ಕೊಹ್ಲಿ ಈ ಪೈಕಿ ಭಾರತದ 308 ಗೆಲುವಿನಲ್ಲಿ ಸಾಕ್ಷಿಯಾಗಿದ್ದಾರೆ. ಟೆಸ್ಟ್‌ಗಳಲ್ಲಿ ನಾಯಕನಾಗಿ ವೇಗವಾಗಿ 4000 ರನ್ ಗಳಿಸಿರುವ ದಾಖಲೆ ಕೂಡ ಅವರ ಹೆಸರಿನಲ್ಲಿದೆ.
Advertisement
Advertisement
ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 16 ಶತಕ ಸಿಡಿಸಿದ್ದಾರೆ. ಕೊಹ್ಲಿ ನಾಯಕನಾಗಿ ಭಾರತದ 71 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು.
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೊಹ್ಲಿ, ವಿಶ್ವಕಪ್ (World Cup 2023) ಗೆಲ್ಲುವ ಉತ್ಸಾಹದಲ್ಲೂ ಇದ್ದಾರೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಆಸೀಸ್‌ಗೆ 33 ರನ್ ಜಯ; ಸೆಮಿ-ಫೈನಲ್‌ಗೆ ಇನ್ನೂ ಹತ್ತಿರ