ಹಾವೇರಿ: ಇಂದು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 129ನೇ ಜನ್ಮದಿನ. ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಶಿಕ್ಷಕರ ಮೇಲಿನ ಗೌರವ ಕಡಿಮೆಯಾಗ್ತಿದೆ. ಆದ್ರೆ ಹಾವೇರಿಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದ ಶಿಕ್ಷಕರು ಎಲ್ಲರಿಗೂ ಮಾದರಿಯಾಗಿದ್ದಾರೆ.
Advertisement
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಾಮಿಕ ಶಾಲೆಯ ವಿಶೇಷ ಅಂದ್ರೆ ಎಲ್ಲಾ ಮಕ್ಕಳಿಗೆ ಡಿಜಿಟಲ್ ಶಿಕ್ಷಣದ ಜೊತೆಗೆ ಸ್ಮಾರ್ಟ್ ಕ್ಲಾಸ್‍ಗಳಾಗಿವೆ. ಕಳೆದ ವರ್ಷ 130 ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ ಇದೀಗ 230ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.
Advertisement
Advertisement
ಕೇವಲ ಒಂದು ವರ್ಷದಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಲು ಶಾಲೆಯ 9 ಜನ ಶಿಕ್ಷಕರ ಆಸಕ್ತಿ ಕಾರಣವಾಗಿದೆ. ಶಾಲೆಯಲ್ಲಿ ಬೋಧನ ಮಟ್ಟ ಸುಧಾರಣೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಉತ್ಸಾಹ ತುಂಬುತ್ತಿದ್ದಾರೆ. ಶನಿವಾರ ಮತ್ತು ಭಾನುವಾರವೂ ಒಬ್ಬೊಬ್ಬ ಶಿಕ್ಷಕರು ಮಕ್ಕಳಿಗೆ ವಿಶೇಷ ಪಾಠ ಪ್ರವಚನ ಮಾಡುತ್ತಾರೆ.
Advertisement
ಶಿಕ್ಷಕರ ಈ ಕಾರ್ಯಕ್ಕೆ ಗ್ರಾಮಸ್ಥರೂ ಸಾಥ್ ನೀಡಿದ್ದಾರೆ. ಸಭೆ ಕರೆದು ಶಾಲೆಯ ಕುಂದುಕೊರತೆ ಚರ್ಚಿಸಿ, ಮಕ್ಕಳಿಗೆ ಬೇಕಾದ ಕಂಪ್ಯೂಟರ್, ಆಟದ ವಸ್ತುಗಳು, ಪೀಠೋಪಕರಣಗಳನ್ನ ಕೊಡುಗೆಯಾಗಿ ನೀಡಿದ್ದಾರೆ. ಶಿಕ್ಷಕರ ದಿನಾಚರಣೆಯ ಇವತ್ತಿನ ಸುಸಂದರ್ಭದಲ್ಲಿ ಹೊಸಕಟ್ಟಿ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರ ಕಾರ್ಯ ಶ್ಲಾಘನಾರ್ಹವಾಗಿದೆ.