ದಿಮಾಪುರ: ನಾಗಾಲ್ಯಾಂಡ್‌ನಲ್ಲಿ (Nagaland) ಭಾರೀ ಮಳೆಗೆ (Rain) ಚುಮೌಕೆಡಿಮಾ (Chumoukedima) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-29ರ ಒಂದು ಭಾಗ ಸಂಪೂರ್ಣ ಕುಸಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.
ಕೊಹಿಮಾದಾ (Kohima) ನ್ಯೂ ಚುಮೌಕೆಡಿಮಾ ಮತ್ತು ಫೆರಿಮಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿದ್ದ ಆರು ಮೃತದೇಹಗಳನ್ನು ರಾಜ್ಯ ವಿಪತ್ತು ಪಡೆ ಹೊರತೆಗೆದಿದೆ. ಇನ್ನು ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಭೂ ಕುಸಿತದಿಂದ ಅನೇಕರು ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ
Advertisement
Advertisement
ಎಸ್‌ಡಿಆರ್‌ಎಫ್ ತಂಡದಿಂದ ಶೋಧಕಾರ್ಯ ಮುಂದುವರೆದಿದ್ದು, ಸ್ಥಳೀಯರು ಕೂಡ ಇವರೊಂದಿಗೆ ಕೈಜೋಡಿಸಿದ್ದಾರೆ. ರಾತ್ರೋರಾತ್ರಿ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದ್ದು, ದಿಮಾಪುರ ಮತ್ತು ನಾಗಾಲ್ಯಾಂಡ್ ರಾಜಧಾನಿ ಕೊಹಿಮಾ ನಡುವೆ ಸಂಪರ್ಕ ಕಡಿತಗೊಂಡಿದೆ. ಹೆದ್ದಾರಿ ಕುಸಿತದಿಂದ ರಾಜಧಾನಿಗೆ ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ತರಕಾರಿ ಮತ್ತು ದಿನಸಿ ಅಂಗಡಿಗಳ ಎದುರು ದೊಡ್ಡ ಸಾಲು ಏರ್ಪಟ್ಟಿದೆ. ಅಲ್ಲದೇ ಪೆಟ್ರೋಲ್ ಬಂಕ್‌ಗಳ ಬಳಿಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ
Advertisement
Advertisement
ಇನ್ನು ಘಟನೆಯ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೋ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರೀ ಮಳೆಗೆ ಎನ್‌ಹೆಚ್-29ರ ಒಂದು ಭಾಗ ಕುಸಿದಿರುವುದರಿಂದ ನಾನು ಕಳವಳಗೊಂಡಿದ್ದೇನೆ. ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ. ಕುಸಿದಿರುವ ಹೆದ್ದಾರಿ ಪುನರ್ ನಿರ್ಮಾಣ ಮಾಡುವ ಮೂಲಕ ಆದಷ್ಟು ಬೇಗ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ