Connect with us

ತಮಾಷೆಗಾಗಿ ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ್ರು!

ತಮಾಷೆಗಾಗಿ ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ್ರು!

ಲಕ್ನೋ: ಉತ್ತರಪ್ರದೇಶದ ಬುಲಂದರ್ ಶಹರ್ ನಲ್ಲಿ ಜ. 2ರಂದು ನಡೆದ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಜುಲ್ಫೀಕರ್ ಅಬ್ಬಸಿ ಹಾಗೂ ದಿಲ್ ಶದ್ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಬುಲಂದರ್ ಶಹರ್ ನ ಸಿಕಂದ್ರಾಬಾದ್ ನಿವಾಸಿಗಳು ಎನ್ನಲಾಗಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿ ಇಸ್ರೈಲಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳು ಮೊದಲು ಸಿನಿಮಾ ನೋಡಿದ್ದಾರೆ. ನಂತರ ಮದ್ಯಪಾನ ಸೇವಿಸಿ, ಬಳಿಕ ಬುಲಂದರ್ ಶಹರ್ ರಾಷ್ಟ್ರೀಯ ಹೆದ್ದಾರಿ 91ರಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಆರೋಪಿಗಳು ತಮಾಷೆಗಾಗಿ ಈ ಕೃತ್ಯ ಎಸಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಬಾಲಕಿ ಟ್ಯೂಷನ್ ನಿಂದ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಆಕೆಯನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮ್ಮ ಕಾರಿನೊಳಗೆ ಬಲವಂತವಾಗಿ ಎಳೆದುಕೊಂಡಿದ್ದಾರೆ. ಬಳಿಕೆ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಕತ್ತು ಹಿಸುಕಿ ಕೊಲೆಗೈದಿದ್ದಾರೆ. ನಂತ್ರ ಶವವನನ್ನು ಗ್ರೇಟರ್ ನೋಯ್ಡಾದಲ್ಲಿರೋ ಬಿಲ್ ಅಕ್ಬರ್ ಪುರ್ ಗ್ರಾಮದಲ್ಲಿನ ಕಾಲುವೆಗೆ ಎಸೆದಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಸದ್ಯ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಾಲಕಿಯನ್ನು ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಹೇಳಿದಾಗ ಪೊಲೀಸರು ಇದೊಂದು ಲವ್ ಕೇಸ್ ಎಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ನಿರಾಕರಿಸಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.

Advertisement
Advertisement