Connect with us

Chitradurga

ಹೆದ್ದಾರಿಯಲ್ಲಿ ಭೀಕರ ಅಪಘಾತ- ಪಾದಚಾರಿ, ಸವಾರ ಸಾವು

Published

on

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮೃತರನ್ನು ಬೈಕ್ ಸವಾರ ಪವನ್(25), ಪಾದಚಾರಿ ಮುತ್ತಯ್ಯ(60) ಎಂದು ಗುರುತಿಸಲಾಗಿದೆ. ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಮೃತ ದೇಹಗಳು ಗುರುತಿಸಲು ಸಾಧ್ಯವಾಗದ ರೀತಿಯಲ್ಲಿ ಜಜ್ಜಿ ಹೋಗಿದೆ. ರಾಯಾಪುರ ರಾಷ್ಟ್ರೀಯ ಹೆದ್ದಾರಿ-150 ಬಳಿ ಈ ಭೀಕರವಾದ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸಿರುವ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಯಾಪುರ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *