ಟೆಹರಾನ್: ಹಿಜಬ್ ಕಡ್ಡಾಯಗೊಳಿಸಿದ ಸರ್ಕಾರದ ಆದೇಶವನ್ನು ಖಂಡಿಸಿ ಇರಾನ್ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.
See how these brave Iranian women risked their lives to echo the voice of all women who have been oppressed by the fascist religious regime rulling Iran.#No2Hijab#حجاب_بی_حجابpic.twitter.com/10LpvAmolm
— #No2IR (@S13802002) July 12, 2022
Advertisement
ಈ ತಿಂಗಳ ಆರಂಭದಲ್ಲಿ, ಈಶಾನ್ಯ ಇರಾನ್‌ನ ಮಶ್ಹದ್ ನಗರದ ಡೆಪ್ಯೂಟಿ ಪ್ರಾಸಿಕ್ಯೂಟರ್, ಮೆಟ್ರೋ, ಸರ್ಕಾರಿ ಕಚೇರಿ, ಬ್ಯಾಂಕ್‌ಗಳ ಪ್ರವೇಶಕ್ಕೆ ಹಿಜಬ್ ಕಡ್ಡಾಯಗೊಳಿಸಿ ಆದೇಶ ಪ್ರಕಟಿಸಿದ್ದರು. ಈ ನಿರ್ಧಾರಕ್ಕೆ ನಗರದ ಮೇಯರ್ ವಿರೋಧ ವ್ಯಕ್ತಪಡಿಸಿದ್ದರೂ ಕೊನೆಗೆ ಅನುಮತಿ ನೀಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಸಿದ್ದರಾಮೋತ್ಸವ ಮಾದರಿಯಲ್ಲೇ ಶಿವಕುಮಾರೋತ್ಸವ ಮಾಡಿ – ಡಿಕೆಶಿ ಶಿಷ್ಯನಿಂದ ಪತ್ರ
Advertisement
Iranian women are joining a massive anti-hijab campaign across Iran, shooting videos of themselves defying the Islamic Republic’s #hijab rules in public places.#No2Hijab #WalkingUnveiled pic.twitter.com/06ZP7WgwFj
— Iran International English (@IranIntl_En) July 12, 2022
Advertisement
ಜುಲೈ 12 ರಂದು ಸರ್ಕಾರ “ಹಿಜಬ್ ಮತ್ತು ಪರಿಶುದ್ಧತೆ ದಿನ”ವನ್ನಾಗಿ ಆಚರಿಸಲು ಕರೆ ನೀಡಿತ್ತು. ಆದರೆ ಮಹಿಳೆಯರು ಈ ಆಚರಣೆಯನ್ನು ಖಂಡಿಸಿ ಸಾರ್ವಜನಿಕವಾಗಿ ಹಿಜಬ್ ತೆಗೆದು ಪ್ರತಿಭಟನೆ ನಡೆಸಿದ್ದಾರೆ.#No2hijab ಹ್ಯಾಶ್‌ಟ್ಯಾಗ್ ಬಳಸಿ ಇರಾನಿ ಮಹಿಳೆಯರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಇದನ್ನೂ ಓದಿ: ಮುಂದಿನ ವಾರ ಸೂಕ್ತ ಪೀಠದಲ್ಲಿ ಹಿಜಬ್ ಅರ್ಜಿ ವಿಚಾರಣೆ – ಸುಪ್ರೀಂಕೋರ್ಟ್
Advertisement
Brave Iranian women are defying the country’s compulsory hijab law by removing their scarves in public on the official Hijab and Chastity Day. #No2hijab #حجاب_بی_حجاب pic.twitter.com/IRaHNUAemT
— Golnaz Esfandiari (@GEsfandiari) July 12, 2022
ಹಿಜಬ್ ಕಾನೂನು ಹೇಗಿದೆ?
1979ರ ಇಸ್ಲಾಮಿಕ್ ಕ್ರಾಂತಿಯ ನಂತರ ರಚಿಸಲಾದ ಇರಾನಿನ ಕಾನೂನಿನ ಪ್ರಕಾರ 9 ವರ್ಷ ಮೀರಿದ ಎಲ್ಲ ಹುಡುಗಿಯರು/ಮಹಿಳೆಯರು ಹಿಜಬ್ ಧರಿಸುವುದು ಕಡ್ಡಾಯ. ಈ ಕಾನೂನು ಉಲ್ಲಂಘನೆ ಮಾಡಿದರೆ ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ. 2017 ರಿಂದ 2019ರ ಅವಧಿಯಲ್ಲಿ ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಹಿಜಬ್ ಕಡ್ಡಾಯ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಬಳಿಕ 2019ರಲ್ಲಿ ಸಾರ್ವಜನಿಕವಾಗಿ ಹಿಜಬ್ ತೆಗೆದು ವೀಡಿಯೋ ಮಾಡಿದರೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]