ಮಂಡ್ಯ: ಹಿಜಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಈಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ. ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಹುಡುಗುರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರೆ ಮುಸ್ಕಾನ್ ಎಂಬ ವಿದ್ಯಾರ್ಥಿನಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದಾಳೆ.
ವಿದ್ಯಾರ್ಥಿನಿ ಹೇಳಿದ್ದೇನು?
ನಾನು ಎಂದಿನಂತೆ ಬುರ್ಕಾ ಧರಿಸಿ ಕಾಲೇಜು ಪ್ರವೇಶಿಸಿದೆ. ಈ ವೇಳೆ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿತು. ನಾನು ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ. ಆ ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಉಳಿದ 90 ಪ್ರತಿಶತ ಯುವಕರು ಹೊರಗಿನಿಂದ ಬಂದವರಾಗಿದ್ದರು. ಇದನ್ನೂ ಓದಿ: ಹಿಜಬ್-ಕೇಸರಿ ಶಾಲು ವಿವಾದ ಮಕ್ಕಳಲ್ಲಿ ವಿಷ ಬೀಜ ಬಿತ್ತನೆ, ದೇಶಕ್ಕೆ ಮಾರಕ: ಸಚಿವ ಮುನಿರತ್ನ
Advertisement
Advertisement
ಶಿಕ್ಷಣವೇ ನಮ್ಮ ಆದ್ಯತೆ. ಆದರೆ ಅವರು ಅದನ್ನೂ ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಒಂದು ತುಂಡು ಬಟ್ಟೆ ವಿಚಾರಕ್ಕೆ ನಮ್ಮ ಶಿಕ್ಷಣ ಹಾಳುಮಾಡಲು ಯತ್ನಿಸುತ್ತಿದ್ದಾರೆ. ನಾವು ಯಾವಾಗಲೂ ಬುರ್ಕಾ ಮತ್ತು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದೆವು. ಕಾಲೇಜಿಗೆ ಬಂದಾಗ ಬುರ್ಕಾ ತೆಗೆದು, ಹಿಜಬ್ ಮಾತ್ರ ಹಾಕಿಕೊಂಡು ತರಗತಿಯಲ್ಲಿ ಕೂರುತ್ತಿದ್ದೆವು. ಯಾವಾಗಲೂ ಇದಕ್ಕೆ ವಿರೋಧ ಇರಲಿಲ್ಲ. ಆದರೆ ಒಂದು ವಾರದಿಂದ ಹಿಜಬ್‌ಗೂ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
Advertisement
ಹಿಜಬ್ ನಮ್ಮ ಭಾಗವೇ ಆಗಿದೆ. ನಮ್ಮ ಕಾಲೇಜಿನ ಪ್ರಾಂಶುಪಾಲರೂ ಇದಕ್ಕೆ ಯಾವುದೇ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿಲ್ಲ. ಹೊರಗಿನವರು ಪ್ರತಿರೋಧ ವ್ಯಕ್ತಪಡಿಸಲು ಶುರು ಮಾಡಿದ್ದಾರೆ. ಬುರ್ಕಾವನ್ನು ಹಾಕಿ ಬರಬೇಡಿ ಎಂದು ನಮ್ಮ ಪ್ರಾಂಶುಪಾಲರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್ ವಿವಾದ ಕೋರ್ಟ್‌ನಲ್ಲಿ ಏನಾಯ್ತು?
Advertisement
ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಒಂದು ಭಾಗ ಹಿಜಬ್. ನಾವು ಹಿಜಬ್‌ಗಾಗಿ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ನಾವಿಲ್ಲಿ ಸುರಕ್ಷಿತವಾಗಿದ್ದೇವೆ. ನಾವು ನಿಮ್ಮೊಟ್ಟಿಗಿದ್ದೇವೆ ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಘಟನೆ ಕುರಿತು ಮಾತನಾಡಿದ್ದಾರೆ.