ನ್ಯೂಯಾರ್ಕ್: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.

ಕರ್ನಾಟಕವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರ್ಧರಿಸಬಾರದು. ಶಾಲಾ-ಕಾಲೇಜುಗಳಲ್ಲಿ ಹಿಜಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ. ಆ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅವಮಾನಿಸುತ್ತಿದೆ ಎಂದು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ರಷದ್ ಹುಸೇನ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜೈಪುರಕ್ಕೆ ಕಾಲಿಟ್ಟ ಹಿಜಬ್ ವಿವಾದ – ಬುರ್ಕಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನೋ ಎಂಟ್ರಿ ಎಂದ ಕಾಲೇಜ್
https://twitter.com/IRF_Ambassador/status/1492153532350402564?ref_src=twsrc%5Etfw%7Ctwcamp%5Etweetembed%7Ctwterm%5E1492153532350402564%7Ctwgr%5E%7Ctwcon%5Es1_&ref_url=https%3A%2F%2Findianexpress.com%2Farticle%2Findia%2Fhijab-bans-in-schools-violate-religious-freedom-us-official-7768457%2F
ಆಸ್ಟ್ರೇಲಿಯಾದ ಮೆಲ್ಬರ್ನ್‌ನಲ್ಲಿ ನಡೆದ ʼಕ್ವಾಡ್ʼ ಸದಸ್ಯ ರಾಷ್ಟ್ರಗಳ ಸಭೆಯ ಬೆನ್ನಲ್ಲೇ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟೊನಿ ಬ್ಲಿಂಕೆನ್ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ತಲೆದೋರಿರುವ ಹಿಜಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನ, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನೂ ಓದಿ: ಎಸ್‌ಪಿ ಸರ್ಕಾರ ಇದ್ದಾಗ ಕೇವಲ ಒಂದು ಜಾತಿಯ ಅಭಿವೃದ್ಧಿಗಾಗಿ ಕೆಲಸ ಮಾಡಿತು: ಅಮಿತ್ ಶಾ
