-ಹಿಜಾಬ್ ಪ್ರಕರಣದ ಹಿಂದಿರುವ ಕಾಣದ ಕೈಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ರಾಜಕೀಯ ಪ್ರೇರಿತವಾಗಿದೆ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆಡಳಿತಾರೂಢ ಬಿಜೆಪಿ ಪಕ್ಷ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
Advertisement
ಟ್ವೀಟ್ನಲ್ಲಿ ಏನಿದೆ?: ರಾಜ್ಯದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ರಾಜಕೀಯ ಪ್ರೇರಿತವಾಗಿದೆ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಜನಮಾನಸದಿಂದ ಮಾಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಮತೀಯವಾದಿ ಶಕ್ತಿಗಳ ಜೊತೆ ಸೇರಿ ಈ ವಿವಾದವನ್ನು ವಿಸ್ತಾರಗೊಳಿಸುತ್ತಿದೆ ಎಂದು ವಾಗ್ಧಾಳಿ ಮಾಡಿದೆ.
Advertisement
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ರಾಜಕೀಯ ಪ್ರೇರಿತ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ.
ಜನಮಾನಸದಿಂದ ಮಾಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಮತೀಯವಾದಿ ಶಕ್ತಿಗಳ ಜತೆ ಸೇರಿ ಈ ವಿವಾದವನ್ನು ವಿಸ್ತಾರಗೊಳಿಸುತ್ತಿದೆ. ಇಲ್ಲಿರುವುದು ಮತಬ್ಯಾಂಕ್ ರಾಜಕಾರಣ ಮಾತ್ರ.#CongressVoteBankPolitics
— BJP Karnataka (@BJP4Karnataka) February 5, 2022
Advertisement
ಇಲ್ಲಿರುವುದು ಮತಬ್ಯಾಂಕ್ ರಾಜಕಾರಣ ಮಾತ್ರವಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು ಅಂದು ಇಲ್ಲದ ವಿವಾದ ಇಂದೇಕೆ? ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ ಸಿದ್ದರಾಮಯ್ಯ ಅವರು ಹಿಜಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದೆ. ಇದನ್ನೂ ಓದಿ: ಅಧಿಕಾರಕ್ಕಾಗಿ ಸಿದ್ದರಾಮಯ್ಯ ಅವರು ಸಿದ್ದರಹೀಮ್ ಅಯ್ಯ ಆಗ್ತಾರೆ: ಪ್ರತಾಪ್ಸಿಂಹ
Advertisement
ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರೇ, ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ?
ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ @siddaramaiah ಅವರು ಹಿಜಾಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ.#CongressVoteBankPolitics
— BJP Karnataka (@BJP4Karnataka) February 5, 2022
ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ. ಹಿಜಾಬ್ ಪ್ರಕರಣದ ಹಿಂದಿರುವ “ಕಾಣದ ಕೈ”ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ. ಇದನ್ನೂ ಓದಿ: ಗೋವಾ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿ: ರಾಹುಲ್ ಗಾಂಧಿ