ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.
ಇಂದು (ಸೆ.5) ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ (Kundapura) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ.ಇದನ್ನೂ ಓದಿ: 2023-24ರಲ್ಲಿ ಅತಿಹೆಚ್ಚು ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳು ಇವರೇ – ಕಿಂಗ್ ಕೊಹ್ಲಿ, ಬಾದ್ ಶಾಗೆ ಅಗ್ರಸ್ಥಾನ
- Advertisement -
- Advertisement -
ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ (Hijab Contraversy) ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ (Congress) ಸರ್ಕಾರ ಇದಕ್ಕೆ ತಡೆ ನೀಡಿದೆ.
- Advertisement -
- Advertisement -
ಏನಿದರ ಹಿನ್ನೆಲೆ:
ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದ್ದು, ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ ಹಿಂಪಡೆಯುವಂತೆ ಕೆಲ ಪ್ರಗತಿಪರರು ಒತ್ತಡ ಹಾಕಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು