ತುಮಕೂರು: ತರಗತಿಗಳಲ್ಲಿ ಹಿಜಬ್ ಹಾಕಿಕೊಂಡು ಪಾಠ ಮಾಡಬಾರದು ಎಂಬ ಸರ್ಕಾರದ ಆದೇಶದಿಂದ, ತನ್ನ ಆತ್ಮಗೌರಕ್ಕೆ ಧಕ್ಕೆ ಬಂದಿದ್ದರಿಂದ ಖಾಸಗಿ ಕಾಲೇಜಿನ ಉಪನ್ಯಾಸಕಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಉಪನ್ಯಾಸಕಿ ಈಗ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಚಾಂದಿನಿ ನಾಝ್ ಜೈನ್ ಪಿಯು ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಕಳೆದ ಮೂರು ವರ್ಷದಿಂದ ನಾನು ಹಿಜಬ್ ಹಾಕಿಕೊಂಡು ಪಾಠ ಮಾಡುತಿದ್ದೇನೆ. ಅಲ್ಲಿಂದ ಇಲ್ಲಿವರೆಗೂ ಏನೂ ತೊಂದರೆ ಆಗಿರಲಿಲ್ಲ. ಆದರೆ ನಿನ್ನೆ ದಿನ ಪ್ರಾಂಶುಪಾಲರು ಸರ್ಕಾರದ ಆದೇಶವನ್ನು ಪಾಲನೆ ಮಾಡುವಂತೆ ನನಗೆ ತಿಳಿಸಿದರು. ಇದರಿಂದ ನನ್ನ ಆತ್ಮ ಗೌರವಕ್ಕೆ ಧಕ್ಕೆ ಉಂಟಾಗಿದ್ದರಿಂದ ನನ್ನ ಉಪನ್ಯಾಸಕಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Advertisement
Advertisement
ನಡೆದಿದ್ದೇನು?: ತುಮಕೂರು ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಜೈನ್ ಪಿಯು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಚಾಂದಿನಿ ನಯಾಜ್ ರಾಜೀನಾಮೆ ಕೊಟ್ಟಿದ್ದರು. ಕಳೆದ ಮೂರು ವರ್ಷಗಳಿಂದ ಜೈನ್ ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ಹಲವು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಹಿಜಬ್ ತೆಗೆದು ತರಗತಿಯೊಳಗೆ ಬರಬೇಕು ಎಂಬ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ ಕೊಟ್ಟೆ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!
Advertisement
Advertisement
ಹಿಜಬ್ ವಿವಾದದಿಂದಾಗಿ ತಮ್ಮ ಧರ್ಮಕ್ಕೆ ಹೆಚ್ಚು ಅಧ್ಯತೆ ಕೊಟ್ಟು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇವರು ಮಾತ್ರವಲ್ಲ ಕಾಲೇಜಿನ ವಿದ್ಯಾರ್ಥಿನಿಯರು ಧರ್ಮವೇ ಮುಖ್ಯ ಎಂದು ಕಾಲೇಜನ್ನೆ ಬಿಟ್ಟು ಹೋಗುತ್ತಿದ್ದಾರೆ. ಆದರೆ ನ್ಯಾಯಾಲಯವು ಮಕ್ಕಳಲ್ಲಿ ಒಂದೇ ರೀತಿ ನಿಯಮವಿರಬೇಕು ಎಂದು ಈ ನಿರ್ಧಾರ ಮಾಡಿದ್ದು, ಇದಕ್ಕೆ ಪರ-ವಿರೋಧ ಕೇಳಿಬರುತ್ತಿದೆ. ಇದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!