ಉಡುಪಿ: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.
Advertisement
ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದವರೆಗೆ ಬಿಟ್ಟುಕೊಂಡಿದೆ. ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರ ಪೋಷಕರು ಸಹ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಲೋಕಸಭೆ ಕಲಾಪದಲ್ಲಿ ಹಿಜಬ್ ಚರ್ಚೆ – ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಆಗ್ರಹ
Advertisement
ತರಗತಿಗೆ ಬಿಡುವಂತೆ ಒತ್ತಾಯಿಸಿದ್ದರೂ, ತರಗತಿಗೆ ಅವಕಾಶ ಕೊಟ್ಟಿಲ್ಲ. ಇದರಿಂದ ಪೋಷಕರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕುಂದಾಪುರ ಠಾಣಾ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀಕಾಂತ್, ಪ್ರತಿಭಟನೆ ನಡೆಸಿದರೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ನಂತರ ಕಾಲೇಜು ಸಿಬ್ಬಂದಿ ಕಾಲೇಜು ಗೇಟಿನ ಬೀಗ ಹಾಕಿದ್ದಾರೆ.
Advertisement
Advertisement
ಗೇಟ್ ಬಳಿಯೇ ಯುವತಿಯರು ಮಧ್ಯಾಹ್ನದ ಊಟ ಮಾಡಿದ್ದಾರೆ. ಸಂಜೆವರೆಗೂ ಗೇಟ್ ಬಳಿಯೇ ಇದ್ದ ವಿದ್ಯಾರ್ಥಿಯರು ಬುರ್ಖಾ ತೊಟ್ಟು ಮನೆಗೆ ವಾಪಾಸ್ಸಾಗಿದ್ದಾರೆ. ಇಂದು ಬೆಳಗ್ಗಿನಿಂದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ನಂತರ ಕಾಲೇಜು ಬಿಟ್ಟ ಮೇಲೆ ಸಂಜೆ ಮನೆಗೆ ವಾಪಸ್ಸಾಗಿದ್ದಾರೆ. ಇದನ್ನೂ ಓದಿ: ಕಾಲೇಜುಗಳಲ್ಲಿ ಮುಂದಿನ ವರ್ಷದಿಂದ ಏಕರೂಪ ಸಮವಸ್ತ್ರ ನಿಯಮ ಜಾರಿ