ಬೆಂಗಳೂರು: ಹಿಜಬ್(Hijab) ಬಗ್ಗೆ ಪಕ್ಷದಲ್ಲಿ ಯಾರೂ ಬಹಿರಂಗ ಚರ್ಚೆ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹಿಜಬ್ ಧರಿಸುವುದು ಮೂಲಭೂತ ಹಕ್ಕು. ಅದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸುವುದು ಮೂಲಭೂತ ಹಕ್ಕು. ವಿದ್ಯಾರ್ಥಿನಿಯರನ್ನು ತಡೆದ ಪ್ರಿನ್ಸಿಪಾಲನ್ನು ಸಸ್ಪೆಂಡ್ ಮಾಡಬೇಕು: ಸಿದ್ದರಾಮಯ್ಯ
Advertisement
Advertisement
ಈಗಾಗಲೇ ಪ್ರಕರಣ ಕೋರ್ಟ್‍ನಲ್ಲಿದೆ. ಕೋರ್ಟ್‍ನಲ್ಲಿ ಇರುವಾಗ ಪಕ್ಷದ ಅಧ್ಯಕ್ಷನಾಗಿ ಅಭಿಪ್ರಾಯ ಹೇರುವುದಕ್ಕೆ ಆಗುವುದಿಲ್ಲ. ಇದು ಬಹಿರಂಗ ಚರ್ಚೆ ವಿಚಾರ ಅಲ್ಲ. ನಮ್ಮ ಚೌಕಟ್ಟಿನಲ್ಲಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಮವಸ್ತ್ರದ ಆದೇಶ ಪಾಲಿಸದಿದ್ದರೆ ಕಾಲೇಜಿನಿಂದಲೇ ಡಿಬಾರ್
Advertisement
ಹಿಜಬ್, ಕೇಸರಿ ಘರ್ಷಣೆ ವಿಚಾರವನ್ನು ನಮ್ಮ ಸ್ಥಳೀಯ ನಾಯಕರ ಜೊತೆ ಚರ್ಚಿಸಬೇಕು. ಅವರ ಜೀವನ, ಸಂಸ್ಕೃತಿ ಬಗ್ಗೆ ಚರ್ಚಿಸಬೇಕು. ಪದ್ಧತಿಗಳು ಮುಂದುವರೆದುಕೊಂಡು ಬಂದಿವೆ. ಇದು ಮಕ್ಕಳ ಸೂಕ್ಷ್ಮ ವಿಚಾರವಾದ ಕಾರಣ ಚರ್ಚೆ ಮಾಡಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದರು.