ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುರ್ಖಾ ತೊಟ್ಟು ಬಂದಿದ್ದ 22 ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಧ್ಯಾಪಕರು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡದೇ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿದ್ದಾರೆ.
ಹಿಜಬ್ ತೊಟ್ಟು ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಸರ್ಕಾರದ ಆದೇಶದ ಬಗ್ಗೆ ತಿಳಿ ಹೇಳಲು ಪ್ರಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಬಿಡದೇ ಹಿಜಬ್ ನಮ್ಮ ಹಕ್ಕು. ನಾವು ಕೋರ್ಟ್ ಆದೇಶ ನೀಡುವ ವರೆಗೂ ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್
ಪ್ರಾಂಶುಪಾಲರು ಹಿಜಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜಿನ ಸಭಾಂಗಣದ ಕೊಠಡಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿನಿಯರು ನಾವು ಹಿಂದಿನಿಂದಲೂ ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದೆವು. ಆದರೆ ಈಗ ನಮ್ಮನ್ನು ಬೇರೆ ರೀತಿ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ್ರೆ ನಾಳೆಯಿಂದ ಪಂಚೆ, ಶಾಲು, ರುದ್ರಾಕ್ಷಿಯೊಂದಿಗೆ ವಿದ್ಯಾರ್ಥಿಗಳು ಹಾಜರ್
ನಮಗೆ ಪ್ರತ್ಯೇಕ ಕೊಠಡಿಯಲ್ಲಿ ಕುಳಿತುಕೊಳ್ಳುವುದು ಬೇಸರವಾಗಿದೆ. ತರಗತಿಗಳೂ ಮಿಸ್ ಆಗುತ್ತಿವೆ. ನಮ್ಮ ಪೋಷಕರು ಹಿಜಬ್ ಧರಿಸಿ ಕಾಲೇಜಿಗೆ ಹೋಗುವಂತೆ ಹೇಳಿದ್ದಾರೆ. ನಮಗೂ ಹಿಜಬ್ ಧರಿಸುವ ಬಗ್ಗೆ ಖುಷಿ ಇದೆ. ನ್ಯಾಯಾಲಯ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂಬ ಭರವಸೆ ಇದೆ. ತೀರ್ಪಿನ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ವಿದ್ಯಾರ್ಥಿನಿಯರು ಪ್ರತಿಕ್ರಿಯಿಸಿದ್ದಾರೆ.