ಬೆಂಗಳೂರು: ಕೋರ್ಟ್ ತೀರ್ಪು ಬರುವ ತನಕ ಯಾವುದೇ ಧಾರ್ಮಿಕ ಉಡುಪು ಧರಿಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿದ್ದರೂ, ಅದನ್ನು ಮೀರಿ ಅಲ್ಪ ಸಂಖ್ಯಾತರು ಹಿಜಾಬ್ ಜೊತೆಗೆ ಬುರ್ಕಾ ಧರಿಸಿ ಬರುತ್ತಿದ್ದಾರೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ವಕ್ತಾರ ಮೋಹನ್ ಗೌಡ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಮಧ್ಯಂತರ ಆದೇಶ ಬಂದ ನಂತರದಿಂದ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಬಿಟ್ಟು ತರಗತಿಗೆ ಹಾಜರಾಗಿದ್ದಾರೆ. ಕುಶಾಲನಗರ ಸೇರಿದಂತೆ ಹಲವು ಕಡೆ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಜೊತೆಗೆ ಕಾನೂನು ಚೌಕಟ್ಟು ಮೀರಿ ಮುಸ್ಲಿಂ ವಿದ್ಯಾರ್ಥಿಗಳು ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಹಿಜಾಬ್ ವಿವಾದದ ಹಿಂದೆ ಮತೀಯ ಶಕ್ತಿಗಳು ಕೆಲಸ ಮಾಡುತ್ತಿವೆ. ಇಸ್ಲಾಮಿಕ್‍ನ ಸಮವಸ್ತ್ರ ಪದ್ಧತಿಯನ್ನು ಶಾಲೆಯಲ್ಲಿ ತರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಜಾ ಮಾಡೋದಾದ್ರೆ ಕಾಂಗ್ರೆಸ್‍ನವರನ್ನೇ ಮಾಡಬೇಕು: ಆರ್ ಅಶೋಕ್
Advertisement
Advertisement
ಹಿಜಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ನ್ಯಾಯಾಲಯದ ಆದೇಶಕ್ಕೆ ಬೆಲೆ ನೀಡುತ್ತಿಲ್ಲ. ಶಿಕ್ಷಕಿ ಶಶಿಕಲಾ ಮುಸ್ಲಿಂ ಪೋಷಕರ ಗಲಾಟೆಯಿಂದ ತನ್ನ ಕೆಲಸವನ್ನೆ ಕಳೆದುಕೊಂಡರು. ಇದೇ ರೀತಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿದೆ ಜೊತೆಗೆ ಬೆದರಿಕೆ ಕರೆಗಳು ಬರುತ್ತಿವೆ. ಹಿಂದೂ ವಿದ್ಯಾರ್ಥಿಗಳಿಗೆ ರಕ್ಷಣೆ ಬೇಕಿದೆ. ಈ ಸಂಬಂಧ ಗೃಹ ಸಚಿವರ ಗಮನಕ್ಕೆ ತಂದಿದ್ದೆವೆ ಎಂದರು. ಇದನ್ನೂ ಓದಿ: ಹಿಜಬ್ ವಿವಾದ – ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಣೆ