ಬಳ್ಳಾರಿ: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ.
Advertisement
ಅವಳಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನ ಸಿದ್ಧಪಡಿಸಲಾಗಿದೆ. ಬಳ್ಳಾರಿಯಲ್ಲಿ 16 ಪರಿಕ್ಷಾ ಕೇಂದ್ರಗಳು ಹಾಗೂ ವಿಜಯನಗರ ಜಿಲ್ಲೆಯಲ್ಲಿ 18 ಕೇಂದ್ರಗಳನ್ನ ತೆರೆಯಲಾಗಿದೆ. ಎರಡೂ ಜಿಲ್ಲೆಯಿಂದ 30,647 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ಆರು ತಂಡಗಳಲ್ಲಿ ಪರೀಕ್ಷಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪಿಯು ಉಪನಿರ್ದೇಶಕ ಎನ್.ರಾಜು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಆಪ್ ಸರ್ಕಾರ ಬರಬೇಕು: ಕೇಜ್ರಿವಾಲ್
Advertisement
Advertisement
ಈ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಯಾವುದೇ ಧರ್ಮದ ಸಂಕೇತದ ಉಡುಪುಗಳನ್ನು ಧರಿಸುವಂತಿಲ್ಲ. ಒಂದು ವೇಳೆ ಹಿಜಬ್ ಹಾಕಿಕೊಂಡು ಪರೀಕ್ಷೆ ಬರೆಯಲು ಬಂದರೆ, ಅವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಹೀಗಾಗಿ ಕಾಲೇಜಿನ ಸಿಡಿಸಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿ ಬರುವಂತೆ ಸರ್ಕಾರ ಆದೇಶ ಮಾಡಿದೆ. ಅದನ್ನೇ ಎಲ್ಲರೂ ಪಾಲನೆ ಮಾಡುವಂತೆ ಮನವಿ ಮಾಡಿದರು.