ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಪಿಯುಸಿ ಬೋರ್ಡ್ ಸಮವಸ್ತ್ರ ಕಡ್ಡಾಯಗೊಳಿಸಿದೆ.
Advertisement
ಈ ಹಿಂದೆ ರಾಜ್ಯದಲ್ಲಿ ಹಿಜಬ್ ವಿವಾದ ಬಳಿಕ ಶಾಲಾ-ಕಾಲೇಜ್‍ಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಆ ಬಳಿಕ ಇದೀಗ ದ್ವಿತೀಯ ಪಿಯುಸಿ ಎಕ್ಸಾಂಗೆ ಹಿಜಬ್ ನಿಷೇಧದ ಬಗ್ಗೆ ಪಿಯುಸಿ ಬೋರ್ಡ್ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗಧಿ ಪಡಿಸಿದ ಸಮವಸ್ತ್ರ ಧರಿಸಬೇಕು. ಖಾಸಗಿ ಕಾಲೇಜುಗಳು ಕಾಲೇಜ್ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Advertisement
Advertisement
ಈಗಾಗಲೇ ಪಿಯುಸಿ ಬೋರ್ಡ್ ತಾಂತ್ರಿಕ ಕಾರಣ ನೀಡಿ 3-4 ಬಾರಿ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಏಪ್ರಿಲ್ 22 ರಿಂದ ಮೇ 18ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಇದನ್ನೂ ಓದಿ: ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ
Advertisement
ಪರಿಷ್ಕೃತ ವೇಳಾಪಟ್ಟಿ ಹೀಗಿದೆ:
ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ರಸಾಯನಶಾಸ್ತ್ರ, ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28- ಕನ್ನಡ, ಅರೇಬಿಕ್
ಮೇ 4- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5- ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮೇ 6- ಇಂಗ್ಲಿಷ್
ಮೇ 10- ಇತಿಹಾಸ, ಭೌತಶಾಸ್ತ್ರ
ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18- ಹಿಂದಿ