ಬೆಂಗಳೂರು: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸಂಘಪರಿವಾರ ಮತ್ತು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
Advertisement
ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಸೇರಿ ಹಲವು ಬಿಜೆಪಿ ನಾಯಕರು ರಾಷ್ಟ್ರ ಧ್ವಜಕ್ಕೆ ಅಪಮಾನಕಾರಿ ಹೇಳಿಕೆ ಕೊಡುತ್ತಿದ್ದಾರೆ. ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದಿಂದ ಅಪಮಾನ ಮಾಡುವ ಕೆಲಸ ಆಗುತ್ತಿದೆ. ಈಶ್ವರಪ್ಪ ಹೇಳಿಕೆ ರಾಷ್ಟ್ರ ವಿರೋಧಿಯಾಗಿದ್ದು, ಜಂಟಿ ಅಧಿವೇಶನದಲ್ಲಿ ನಿಯಮ 59ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲೆ ಚರ್ಚೆ ಮಾಡುವುದಕ್ಕೆ ಅವಕಾಶ ಕೊಡಬೇಕು ಎಂದು ಕೇಳುತ್ತಿದ್ದೇವೆ ಎಂದರು. ಇದನ್ನೂ ಓದಿ: ಹಿಜಬ್ ತೆಗೆಯಲು ನಿರಾಕರಣೆ – ತರಗತಿಗೆ ತೆರಳದೆ ಮನೆಯತ್ತ ಮುಖಮಾಡಿದ 9 ವಿದ್ಯಾರ್ಥಿನಿಯರು
Advertisement
Advertisement
ಹಿಜಬ್ ಗದ್ದಲ ದೊಡ್ಡದಾಗಿ ಮಾಡುತ್ತಿರುವುದು ದೊಡ್ಡ ಷಡ್ಯಂತ್ರ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿ ಮಾಡುವುದು ಸರಿಯಲ್ಲ. ಕೋರ್ಟ್ ಆದೇಶವನ್ನು ಅಧಿಕಾರಿಗಳು ಅವರದೇ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ, ಕಾಂಗ್ರೆಸ್ ಕಾರ್ಯಕರ್ತರು ಯಾವ ವಿದ್ಯಾರ್ಥಿಗಳನ್ನೂ ತಡೆಯಬಾರದು ಅಂತ ಹೋರಾಟ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಸಂಘ ಪರಿವಾರದವರ ಮಾತನ್ನು ಕೇಳಿಕೊಂಡು ಮಕ್ಕಳ ಪ್ರವೇಶ ತಡೆಯಬಾರದೆಂಬುದು ನಮ್ಮ ಆಗ್ರಹವಾಗಿದೆ. ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರನ್ನೂ ಬಂಧಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ
Advertisement