ಬೆಂಗಳೂರು: ರಾಜ್ಯದಲ್ಲಿ ಹಿಜಬ್- ಕೇಸರಿ ಗಲಾಟೆ ಜೋರಾಗುತ್ತಿದ್ದಂತೆ ಸರ್ಕಾರ ಮೂರು ದಿನ ಶಾಲಾ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ. ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ
Advertisement
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
Advertisement
ಹೈಸ್ಕೂಲ್ ಮತ್ತು ಕಾಲೇಜಗಳಿಗೆ ರಜೆ ಘೋಷಿಸಿದ್ದರೂ ಪ್ರಾಥಮಿಕ ಶಾಲೆಗಳು ಎಂದಿನಂತೆ ನಡೆಯುತ್ತದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಬ್ ಧರಿಸಲು ಅವಕಾಶ ಕೋರಿ ಉಡುಪಿಯ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗಿದೆ.