ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

Public TV
2 Min Read
RENUKACHRYA 1

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೇ ಹಿಜಬ್ ವಿವಾದದ ಬಗ್ಗೆ ಮಾತನಾಡುವ ನೀವು ಯಾರ ಪರ ಎಂಬುದನ್ನು ಮೊದಲು ತಿಳಿಸಿ. ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಇಲ್ಲವೇ ಭಾರತ ಮಾತೆಯ ಪರವೋ ಎಂಬುದನ್ನು ಈ ರಾಜ್ಯದ ಜನರಿಗೆ ಮೊದಲು ಹೇಳಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.

DKSHI 3

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುತ್ತುರಾಜ ಎಂದು ಟೀಕಿಸಿದ್ದ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್ ಬಹಳ ದೊಡ್ಡವರು. ಭ್ರಹ್ಮಾಂಡ ಭ್ರಷ್ಟಾಚಾರ ಮಾಡಿ ತಿಹಾರ್ ಜೈಲಿಗೆ ಹೋಗಿ ಬಂದವರು. ಅವರು ದೊಡ್ಡವರು, ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದ್ದಾರೆ. ಕನಕಪುರದ ಬಂಡೆಗಳನ್ನು ಲೂಟಿ ಮಾಡಿ ಸಾಗಿಸಿದ್ದಾರೆ. ಇಂತಹ ದೊಡ್ಡವರ ಬಗ್ಗೆ ಮಾತನ್ನಾಡುವುದಿಲ್ಲ. ನಾನು ಇವರಷ್ಟು ದೊಡ್ಡವನಲ್ಲ. ನಾನು ವೈಯಕ್ತಿಕವಾಗಿ ಮಾತನ್ನಾಡುವುದಿಲ್ಲ. ರಾಜಕೀಯವಾಗಿ ಟೀಕೆ ಮಾಡಿದರೆ ಎದುರಿಸುತ್ತೇನೆ. ವೈಯಕ್ತಿಕ ವಿಚಾರಗಳನ್ನು ತಂದು ಟೀಕಿಸುವುದು ಯಾಕೆ?. ಡಿಕೆಶಿ ಸಿಎಂ ಆಗಲು ಹಗಲುಗನಸು ಕಾಣುತ್ತಿದ್ದಾರೆ. ಅದು ಆಗುವುದು ಕನಸಿನ ಮಾತು ಸಿದ್ದರಾಮಯ್ಯ ಹಾಗೂ ಅವರ ನಡುವೆ ಗುದ್ದಾಟ ನಡೆಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೋದಿಗೆ ನಾನು ಹೆದರೋಲ್ಲ, ಅವರ ಸೊಕ್ಕು ನೋಡಿ ನಗು ಬರುತ್ತೆ: ರಾಹುಲ್‌ ಗಾಂಧಿ

DKSHIVAKUMAR SIDDARAMAIAH 2

ನಾನು ಅಲ್ಪಸಂಖ್ಯಾತ ವಿರೋಧಿ ಅಲ್ಲ. ಆದರೆ ಇಂದು ಗಲಾಟೆಯಾಗುತ್ತಿದೆ. ಅಮಯಾಕ ವಿದ್ಯಾರ್ಥಿನಿಯರ ಹಿಂದೆ ಅಂತರಾಷ್ಟ್ರೀಯ ಭಯೋತ್ಪಾದಕರ ಸಂಘಟನೆ ಕೈವಾಡ ಇದೆ. ನಾನು ಹಳ್ಳಿ ಹೈದ ನನಗೂ ಭಾಷೆ ಬರುತ್ತೆ. ವೈಯಕ್ತಿಕವಾಗಿ ಮಾತಾಡಿದರೆ ನನಗೂ ಮಾತಾಡಲು ಬರುತ್ತದೆ. ನಾನು ಅಲ್ಪಸಂಖ್ಯಾತ ವಿರೋಧಿ ಅಲ್ಲ. ಬಿಜೆಪಿ ಮತ್ತು ಸರ್ಕಾರದ ವರ್ಚಸ್ಸು ಹಾಳು ಮಾಡಲು ಹಿಜಬ್ ವಿಚಾರ ತೆಗೆದುಕೊಂಡು. ಮುಗ್ದ ವಿದ್ಯಾರ್ಥಿಗಳ ಮನಸ್ಸನ್ನು ಹಾಳು ಮಾಡಲಾಗಿದೆ. ಈಗ ಜಮೀರ್, ಖಾದರ್, ತನ್ವೀರ್ ಸೇಠ್ ಎಲ್ಲರೂ ಮಾತನಾಡುತ್ತಾರೆ. ಈ ಹಿಂದೆ ತನ್ವೀರ್ ಸೇಠ್ ತಂದೆ ಅಜೀಜ್ ಸೇಠ್ ಕೋಮು ಗಲಭೆ ಸೃಷ್ಟಿ ಮಾಡಿಸಿ ಅವರ ಪಕ್ಷದ ಸಿಎಂ ಅನ್ನೇ ಕೆಳಗಿಳಿಸಿದ್ದರು ಎಂದು ಟೀಕಿಸಿದರು. ಇದನ್ನೂ ಓದಿ: ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ

ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿದ ವಿಚಾರವಾಗಿ ಮಾತನಾಡಿ, ಸಾಂದರ್ಭಿಕವಾಗಿ ಕೇಸರಿಧ್ವಜ ಹಾರಿಸಲಾಗಿದೆ. ಮುಗ್ಧ ಮನಸ್ಸಿನ ಮಕ್ಕಳು ಕೇಸರಿ ಧ್ವಜ ಹಾರಿಸಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅದರದ್ದೇ ಆದ ಗೌರವ ಇದೆ. ಅಲ್ಪಸಂಖ್ಯಾತ ಮಕ್ಕಳೂ ಮುಗ್ಧರು. ಹಿಂದೂ, ಮುಸಲ್ಮಾನ್ ಎಲ್ಲರೂ ಒಂದೇ. ನಮ್ಮಲ್ಲಿ ಸಾಮರಸ್ಯ ಮೂಡಿಸಬೇಕು. ಈಶ್ವರಪ್ಪ ಬಗ್ಗೆ ಮಾತನ್ನಾಡುವುದಿಲ್ಲ ಅವರು ಹಿರಿಯರು, ಅವರ ಬಗ್ಗೆ ಮಾತನಾಡುವುದಿಲ್ಲ. ರಾಷ್ಟ್ರ ಧ್ವಜದ ಜಾಗದಲ್ಲಿ ಬೇರೆ ಬಾವುಟ ಹಾರಿಸಬಾರದು ಎಂದರು.

Share This Article
Leave a Comment

Leave a Reply

Your email address will not be published. Required fields are marked *