ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷಾ ಸಮಯದಲ್ಲೂ ಹಿಜಬ್ ವಿದ್ಯಾರ್ಥಿನಿಯರು ಹೈಡ್ರಾಮಾ ಮುಂದುವರಿಸಿದ್ದಾರೆ. ಹಿಜಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ.
ರಾಜ್ಯಾದ್ಯಂತ ಇಂದಿನಿಂದ ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್ ಹೋರಾಟಗಾರ್ತಿಯರಾದ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಆಲಿಯಾ ಅಸಾದಿ ಮತ್ತು ರೇಷಂ ಹಾಲ್ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದಿದ್ದರು.
Advertisement
Advertisement
ಕಾಮರ್ಸ್ ವಿಭಾಗದ ಪರೀಕ್ಷೆ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿನಲ್ಲಿದೆ. ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶವಿದೆ. ಹೀಗಾಗಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಕೇಂದ್ರಕ್ಕೆ ಬುರ್ಕಾ, ಹಿಜಬ್ ಧರಿಸಿಕೊಂಡು ಆಗಮಿಸಿದ್ದರು. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್ ಹೋರಾಟಗಾರ್ತಿಯರು
Advertisement
Advertisement
ಕೇಂದ್ರದಲ್ಲಿ ಒಂದು ಕೊಠಡಿ ಇದ್ದು ಅಲ್ಲಿ ಹಿಜಬ್, ಬುರ್ಕಾ ತೆಗೆದು ಪರೀಕ್ಷಗೆ ಹಾಜರಾಗಬೇಕು. ಆದರೆ ಈ ಇಬ್ಬರೂ ಹಿಜಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಈ ವಿಚಾರ ತಿಳಿದು ಉಡಪಿಯ ತಹಶೀಲ್ದಾರ್ ಅರ್ಚನಾ ಭಟ್ ಪರೀಕ್ಷಾ ಕೇಂದ್ರಕ್ಕೆ ಬಂದು ವಿದ್ಯಾರ್ಥಿನಿಯರ ಮನ ಒಲಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: 14 ಮಸೀದಿಗಳ ಮೇಲೆ ದಾಖಲಾಯ್ತುFIR