Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಬಾಯಲ್ಲಿ ಬೆಣ್ಣೆ, ಕಂಕುಳಲ್ಲಿ ದೊಣ್ಣೆ ಹಿಡಿದಂತಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಬಾಯಲ್ಲಿ ಬೆಣ್ಣೆ, ಕಂಕುಳಲ್ಲಿ ದೊಣ್ಣೆ ಹಿಡಿದಂತಿದೆ: ಸಿದ್ದರಾಮಯ್ಯ

Bengaluru City

ಬಿಜೆಪಿ ಬಾಯಲ್ಲಿ ಬೆಣ್ಣೆ, ಕಂಕುಳಲ್ಲಿ ದೊಣ್ಣೆ ಹಿಡಿದಂತಿದೆ: ಸಿದ್ದರಾಮಯ್ಯ

Public TV
Last updated: February 18, 2022 3:28 pm
Public TV
Share
4 Min Read
SIDDARAMAIHA SPOKE
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷ ಜಾತ್ಯಾತೀತ ಸಿದ್ಧಾಂತಕ್ಕೆ ಬದ್ಧವಾಗಿದೆ. ಬಿಜೆಪಿ ಪಕ್ಷ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಬಚಾವೋ ಬೇಟಿ ಪಡಾವೋ ಎನ್ನುತ್ತಾರೆ, ಇದೊಂದು ರೀತಿ ಬಾಯಲ್ಲಿ ಬೆಣ್ಣೆ, ಕಂಕುಳಲ್ಲಿ ದೊಣ್ಣೆ ಎಂಬ ಗಾಧೆ ಮಾತಂತೆ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

bjp - congress

ಬೆಂಗಳೂರಿನಲ್ಲಿ ಇಂದು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ಹೇಳೋದು ಒಂದು, ಮಾಡೋದು ಅದಕ್ಕೆ ವಿರುದ್ಧವಾದ ಕೆಲಸ. ಹಿಜಬ್ ವಿವಾದಕ್ಕೆ ಕಾರಣವಾದ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ, ಎಲ್ಲಾ ಮೂಲಭೂತವಾದಿ ಸಂಘಟನೆಗಳ ವಿರುದ್ಧ ನನ್ನ ಖಂಡನೆಯಿದೆ. ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುವುದು ದೇಶದ್ರೋಹದ ಕೆಲಸ. ಯಾವ ಧರ್ಮ, ಜಾತಿಯವರೇ ಆದರೂ ಅವರಿಗೆ ಶಿಕ್ಷಣ ಸಿಗಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

SIDDRAMAIHA AND DK SHIVAKUMAR

ಸಂಘ ಪರಿವಾದವರು ಅನಗತ್ಯವಾಗಿ ಹಿಜಬ್ ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿಜಬ್ ಧರಿಸುವುದು ನಿನ್ನೆ ಮೊನ್ನೆ ಆರಂಭವಾದುದ್ದಲ್ಲ, ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಕೆಲವರು ಧರಿಸುತ್ತಾರೆ, ಕೆಲವರು ಧರಿಸಲ್ಲ ಅದು ಮುಸ್ಲಿಂ ವಿದ್ಯಾರ್ಥಿಗಳ ವೈಯಕ್ತಿಕ ಆಯ್ಕೆ. ಹಿಜಬ್ ಧರಿಸುವುದರಿಂದ ಇತರರಿಗೆ ಯಾವ ತೊಂದರೆ ಕೂಡ ಆಗಲ್ಲ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ, ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದೆ ಕೂಡ. ಧರ್ಮದ ಸಂಪ್ರದಾಯದ ಪ್ರಕಾರ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಜೈನರು ತಮ್ಮ ಧಾರ್ಮಿಕ ನಂಬಿಕೆಗಳನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈವರೆಗೆ ಯಾವ ತಕರಾರು ಇರಲಿಲ್ಲ. ಇದಕ್ಕೆ ಸಂವಿಧಾನ ಕೂಡ ಅವಕಾಶ ನೀಡಿದೆ, ಇದು ವ್ಯಕ್ತಿಯ ಮೂಲಭೂತ ಹಕ್ಕಾಗಿದೆ. ಇದಕ್ಕೆ ಯಾರೂ ಅಡ್ಡಿಪಡಿಸಬಾರದು ಒತ್ತಾಯಿಸಿದರು.  ಇದನ್ನೂ ಓದಿ: ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್

ಮುಸ್ಲಿಮರು ಇತ್ತೀಚೆಗೆ ಶಿಕ್ಷಣದ ಕಡೆಗೆ ಒಲವು ತೋರಿ ಶಾಲಾ ಕಾಲೇಜಿಗೆ ಬರುತ್ತಿದ್ದಾರೆ, ಮೊದಲೆಲ್ಲ ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣ ಪಡೆಯುವ ಪ್ರಮಾಣ ಕಡಿಮೆಯಿತ್ತು, ಸಂಘ ಪರಿವಾರದವರು ಹಿಜಬ್‍ಅನ್ನು ವಿವಾದ ಮಾಡಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸುವ ಹುನ್ನಾರ ಮಾಡಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾರಿಗೂ ಈ ರೀತಿ ಮಾಡಬಾರದು, ಶಿಕ್ಷಣ ಮೂಲಭೂತ ಹಕ್ಕಾಗಿದೆ. ಮನಮೋಹನ್ ಸಿಂಗ್ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ ತಂದಿತ್ತು, ಆ ಮೂಲಕ ಪ್ರತಿಯೊಬ್ಬರಿಗೂ ಶಿಕ್ಷಣದ ಅವಕಾಶ ನೀಡಿದೆ ಎಂದು ತಿಳಿಸಿದರು.

ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಶಾಲೆಗಳಲ್ಲಿ ಅವರು ಒಂದು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಎಲ್ಲರಿಗೂ ಇದು ಅನ್ವಯವಾಗಲ್ಲ. ಚಾಮರಾಜನಗರದಲ್ಲಿ ಸಚಿವ ಅಶ್ವಥ್ ನಾರಾಯಣ್ ಈ ಸಮವಸ್ತ್ರ ನೀತಿ ಪದವಿ ಕಾಲೇಜುಗಳಿಗೆ ಅನ್ವಯವಾಗಲ್ಲ ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಎಂಬುವವರು ಮೊನ್ನೆ 16ನೇ ತಾರೀಖು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಮೇಲ್ಕಂಡ ಆದೇಶವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಅನ್ವಯವಾಗುತ್ತದೆ ಎಂದಿದ್ದಾರೆ. ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಕಮಿಟಿ ಇಲ್ಲದಿದ್ದಾಗ ಸಮವಸ್ತ್ರ ನೀತಿ ರೂಪಿಸುವುದು ಯಾರು? ಹೀಗಿದ್ದಾಗ ನ್ಯಾಯಾಲಯದ ಆದೇಶ ಪಾಲನೆ ಎಲ್ಲಿ ಸಾಧ್ಯ? ಈ ಸುತ್ತೋಲೆ ಸಂಪೂರ್ಣ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತದೆ ಎಂದರು. ಇದನ್ನೂ ಓದಿ: ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5 -2 ಕೋಟಿ ರೂ.ನಷ್ಟಕ್ಕೆ ಹೊಣೆ ಯಾರು? – ಬಿಜೆಪಿ, ಕಾಂಗ್ರೆಸ್‍ನ್ನು ತಿವಿದ ಎಚ್‍ಡಿಕೆ

ಅಲ್ಪಸಂಖ್ಯಾತ ನಿಯೋಗದ ಜೊತೆ ಡಿ.ಕೆ ಶಿವಕುಮಾರ್ ಅವರೊಂದಿಗೆ ಸಿಎಂ ಭೇಟಿ ಮಾಡಿ ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಹೇಳಿದ್ದೇವೆ. ಮುಖ್ಯಮಂತ್ರಿಗಳು ಸಂಬಂಧಪಟ್ಟವರ ಜೊತೆ ಚರ್ಚಿಸಿ, ಕ್ರಮ ಕೈಗೊಳ್ಳುತ್ತೇವೆ ಮತ್ತು ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತೇವೆ ಎಂದಿದ್ದಾರೆ. ಸರ್ಕಾರದ ನಿಲುವೇ ಗೊಂದಲಮಯವಾಗಿದೆ. ಇದರಿಂದ ಮುಸ್ಲಿಂ ಮಕ್ಕಳ ಪೋಷಕರು ಆತಂಕದಲ್ಲಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಸಭೆ ಕರೆದು ಈ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇನೆ.

ಶಿಕ್ಷಣ ಸಂಸ್ಥೆಗಳ ಬಳಿ ಪೊಲೀಸರಿಗೇನು ಕೆಲಸ? ಪೊಲೀಸರ ಮೂಲಕ ಹೆದರಿಸೋದು ಯಾಕೆ? ಕೇಸ್ ಹಾಕ್ತೀವಿ, ಅರೆಸ್ಟ್ ಮಾಡ್ತೀವಿ ಎಂಬ ಚಿಕ್ಕ ಮಕ್ಕಳನ್ನು ಹೆದರಿಸೋದು ಯಾಕೆ? ಇದೇನು ಪ್ರಜಾಪ್ರಭುತ್ವವೋ ಅಥವಾ ಸರ್ವಾಧಿಕಾರವೋ? ಸರ್ಕಾರವೇ ಇದನ್ನು ಇತ್ಯರ್ಥ ಮಾಡಬಹುದಿತ್ತು, ನ್ಯಾಯಾಲಯದ ಮೆಟ್ಟಿಲು ಹತ್ತಲು ಅವಕಾಶವೇ ಕೊಡಬಾರದಿತ್ತು. ಸರ್ಕಾರ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುವ ದುರುದ್ದೇಶದಿಂದ ವಿವಾದದ ಆರಂಭದಲ್ಲೇ ಅಲಕ್ಷ್ಯ ತೋರಿದ ಕಾರಣಕ್ಕೆ ಇಂದು ದೊಡ್ಡದಾಗಿದೆ ಎಂದು ನುಡಿದರು. ಇದನ್ನೂ ಓದಿ: ಕಾಂಗ್ರೆಸ್ ಅಹೋರಾತ್ರಿ ಧರಣಿ – ಸಿಎಂ, ಬಿಎಸ್‍ವೈ ಸಂಧಾನ ಯತ್ನ ವಿಫಲ

ವಿದ್ಯಾರ್ಥಿಗಳು ಸಮವಸ್ತ್ರ ವಿರೋಧಿಸಿಲ್ಲ. ಸಮವಸ್ತ್ರದೊಂದಿಗೆ ಮೊದಲಿನಿಂದಲೂ ಹಿಜಬ್ ಧರಿಸುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಎಫ್‍ಐಆರ್ ದಾಖಲು ಮಾಡುತ್ತಿರುವುದು ತಪ್ಪು. ಇದಕ್ಕೆಲ್ಲ ಸರ್ಕಾರವೇ ಕಾರಣ ಎಂದು ಕಿಡಿಕಾರಿದರು.

TAGGED:bjpcongressDK ShivakumarHijabsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
19 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
27 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
56 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?