ವಿಜಯಪುರ: ಹಿಜಬ್ ಬಳಿಕ ಇದೀಗ ಸಿಂಧೂರ ವಿವಾದ ಕಾಣಿಸಿಕೊಂಡಿದೆ. ವಿಜಯಪುರದ ಇಂಡಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಯೋರ್ವನಿಗೆ ತರಗತಿ ಪ್ರವೇಶಕ್ಕೆ ನಿರಾಕರಿಸಲಾಗಿದೆ.
ಎಂದಿನಂತೆ ಕಾಲೇಜಿಗೆ ಬಂದ ವಿದ್ಯಾರ್ಥಿ ಗಂಗಾಧರ ಬಡಿಗೇರ್ ಹಣೆಗೆ ಸಿಂಧೂರ ಧರಿಸಿದ್ದ ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಇದನ್ನೂ ಓದಿ: ಇವ್ರರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ
ನಾವು ಕಾಲೇಜ್‍ಗೆ ಹಿಜಬ್ ಅಥವಾ ಕೇಸರಿ ಶಾಲು ಧರಿಸಿ ಬಂದಿಲ್ಲ. ಕುಂಕುಮ ಹಾಕಲು ಯಾಕೆ ಅನುಮತಿ ಇಲ್ಲ ಎಂದು ಗಂಗಾಧರ ಬಡಿಗೇರ್ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಇತರ ಉಪನ್ಯಾಸಕರು ವಿದ್ಯಾರ್ಥಿಯನ್ನು ಮನವೊಲಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಉಪನ್ಯಾಸಕರ ವಾದಕ್ಕೆ ಒಪ್ಪದ ಗಂಗಾಧರ ಬಡಿಗೇರ್‌ನನ್ನು ಮನೆಗೆ ಕಳುಹಿಸಿದ್ದಾರೆ.
ಬಳಿಕ ಗಂಗಾಧರ ಬಡಿಗೇರ್ ಅಡ್ಡವಾಗಿ ಕುಂಕುಮ ಹಚ್ಚಿಕೊಂಡು ಬಂದಿದ್ದಾನೆ ಇದಕ್ಕೆ ಯಾಕೆ ಅವಕಾಶ ಕೊಟ್ಟಿಲ್ಲ ಎಂದು ಇತರ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಗೊಂದಲದ ವಾತಾವರಣವನ್ನು ತಿಳಿಗೊಳಿಸಿದರು. ಇದನ್ನೂ ಓದಿ: ಹಿಜಬ್ ಪ್ರತಿಭಟನೆ – ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲು