ವಿಜಯಪುರ: ನಮ್ಮ ಕಾಲೇಜಿನಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಇಂಡಿ ಡಿಗ್ರಿ ಕಾಲೇಜು ಪ್ರಿನ್ಸಿಪಾಲ್ ಬಿ ಎಸ್ ಪಟ್ಟೇದ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಸಿಂಧೂರ, ಕುಂಕುಮಕ್ಕೆ ನಿರಾಕರಣೆ ವಿಚಾರ ಸತ್ಯಕ್ಕೆ ದೂರವಾದ ವಿಚಾರ. ನಮ್ಮಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇದ್ದೇವೆ ಎಂದು ತಿಳಿಸಿದರು.
ಕೆಲ ವಿದ್ಯಾರ್ಥಿಗಳು ನಮ್ಮ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿದ್ದರಿಂದ ಇಂದು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಮ್ಮ ಜೊತೆ ಮಾತಿನ ಜಟಾಪಟಿ ನಡೆಸಿದ್ದಾರೆ. ಆ ವಿದ್ಯಾರ್ಥಿಗಳಿಗೂ ತಿಳಿ ಹೇಳಿದ್ದು ಆತನು ಕಾಲೇಜಿಗೆ ಹಾಜರಾಗಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇವರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ
ಏನಿದು ವಿವಾದ?
ಎಂದಿನಂತೆ ಕಾಲೇಜಿಗೆ ಬಂದ ವಿದ್ಯಾರ್ಥಿ ಗಂಗಾಧರ ಬಡಿಗೇರ್ ಹಣೆಗೆ ಸಿಂಧೂರ ಧರಿಸಿದ್ದ ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.
ನಾನು ಹಿಜಬ್ ಅಥವಾ ಕೇಸರಿ ಶಾಲು ಧರಿಸಿ ಬಂದಿಲ್ಲ. ಕುಂಕುಮ ಹಾಕಲು ಯಾಕೆ ಅನುಮತಿ ಇಲ್ಲ ಎಂದು ಗಂಗಾಧರ ಬಡಿಗೇರ್ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಇತರ ಉಪನ್ಯಾಸಕರು ವಿದ್ಯಾರ್ಥಿಯನ್ನು ಮನವೊಲಿಸಲು ಪ್ರಯತ್ನ ಪಟ್ಟಿದ್ದರು. ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ