ಜೈಪುರ: ಕರ್ನಾಟಕದಲ್ಲಿ ಹುಟ್ಟಿಕೊಂಡ ಹಿಜಬ್ ವಿವಾದ ಇದೀಗ ಜೈಪುರಕ್ಕೆ ಕಾಲಿಟ್ಟಿದೆ. ಬುರ್ಕಾ ಧರಿಸಿ ಕಾಲೇಜ್‍ಗೆ ಬಂದ ವಿದ್ಯಾರ್ಥಿನಿಯರಿಗೆ ಆಡಳಿತ ಮಂಡಳಿ ಪ್ರವೇಶ ನಿಷೇಧಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿರುವ ಕಸ್ತೂರಿ ದೇವಿ ಕಾಲೇಜಿನಲ್ಲಿ ನಡೆದಿದೆ.
Advertisement
ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜ್‍ಗೆ ಬರುತ್ತಿದ್ದಂತೆ, ಆಡಳಿತ ಮಂಡಳಿ ಪ್ರವೇಶ ನಿಷೇಧಿಸಿದೆ. ಈ ವೇಳೆ ವಿದ್ಯಾರ್ಥಿನಿಯರು ಪ್ರಶ್ನೆ ಮಾಡಿದ್ದಾರೆ. ನಾವು 3 ವರ್ಷದಿಂದ ಕಾಲೇಜಿಗೆ ಬುರ್ಕಾ ಧರಿಸಿ ಬರುತ್ತಿದ್ದೆವು ಆಗ ನಮ್ಮನ್ನು ಯಾರು ಪ್ರಶ್ನಿಸಿಲ್ಲ ಈಗ ಯಾಕೆ ನಿರ್ಬಂಧ ವಿಧಿಸಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ
Advertisement
Advertisement
ಕಾಲೇಜಿನ ಆಡಳಿತ ಮಂಡಳಿ ಪ್ರಕಾರ, ವಿದ್ಯಾರ್ಥಿಗಳು ಕಳೆದ 4-5 ದಿನಗಳಿಂದ ಬುರ್ಕಾ ಧರಿಸಿ ಬರುತ್ತಿದ್ದಾರೆ. ಹಾಗಾಗಿ ನಿರ್ಬಂಧ ವಿಧಿಸಿದ್ದೇವೆ ಎಂದಿದ್ದಾರೆ. ಈ ಮಾತನ್ನು ಸುಳ್ಳು ಎನ್ನುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಲೇಜ್ ಆಡಳಿತ ಮಂಡಳಿ ಏಕಾಏಕಿ ಈರೀತಿ ನಿರ್ಬಂಧ ವಿಧಿಸಲಾಗಿದೆ ಎಂದು ಆಕ್ರೋಶಗೊಂಡಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ ಎನ್ನುವುದಕ್ಕೆ ಈಗ ಇನ್ನೊಂದು ಸಾಕ್ಷ್ಯ ಲಭಿಸಿದೆ: ಬಿಜೆಪಿ
Advertisement
ಕಾಲೇಜ್ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆಗೆ ವಿದ್ಯಾರ್ಥಿನಿಯರ ಪೋಷಕರು ಮುಂದಾಗಿದ್ದಾರೆ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರನ್ನು ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.